ಬಿಜೆಪಿಯದ್ದು ಡೋಂಗಿ ಹಿಂದುತ್ವ, ಶಿವಸೇನೆಯಿಂದ ಚುನಾವಣೆಗೆ ಸ್ಪರ್ಧೆ: ಪ್ರಮೋದ್ ಮುತಾಲಿಕ್
ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು...

Published On :
ಚಿಕ್ಕಮಗಳೂರು: ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು, ಶಿವಸೇನೆಯನ್ನು ಶ್ರೀರಾಮಸೇನೆ ಸಂಪೂರ್ಣವಾಗಿ ಬೆಂಬಲಿಸುತ್ತದೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಶಿವಸೇನೆ ನೇತೃತ್ವದಲ್ಲಿ 60 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತೇವೆ ಎಂದು ಮಂಗಳವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಮೋದ್ ಮುತಾಲಿಕ್, ಜೀವರ್ಗಿ ವಿಧಾನಸಭೆ ಕ್ಷೇತ್ರದಿಂದ ಸಿದ್ದಲಿಂಗ ಸ್ವಾಮೀಜಿ ಸ್ಪರ್ಧಿಸುತ್ತಾರೆ. ನಾನು ಶೃಂಗೇರಿ ಅಥವಾ ತೇರದಾಳ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ಈ ಬಗ್ಗೆ ಎರಡು ದಿನಗಳಲ್ಲಿ ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು.
ಹಿಂದುತ್ವ ನಮ್ಮ ಪ್ರಮುಖ ಅಜೆಂಡಾ. ಆದರೆ ಬಿಜೆಪಿಯದ್ದು ಡೋಂಗಿ ಹಿಂದುತ್ವ. ಅವರು ರಾಜಕೀಯ ಸ್ವಾರ್ಥಕ್ಕಾಗಿ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ. ನಾವು ಹಿಂದುತ್ವಕ್ಕಾಗಿ ರಾಜಕೀಯ ಮಾಡುತ್ತೇವೆ ಹೊರತು, ರಾಜಕೀಯಕ್ಕಾಗಿ ಹಿಂದುತ್ವವಲ್ಲ ಎಂದು ಮುತಾಲಿಕ್ ಸ್ಪಷ್ಟಪಡಿಸಿದರು.
ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಶ್ರೀರಾಮಸೇನೆ ಮುಖ್ಯಸ್ಥ, ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದರೂ ಗೋಮಾಂಸ ಸಾಗಾಟದಲ್ಲಿ ಭಾರತ ನಂಬರ್ 1 ಆಗಿದೆ. ಕೇಂದ್ರ ಸಚಿವ ಅನಂತ್ ಕುಮಾರ್ ಗೋಮಾಂಸ ನಿಷೇಧದ ಬಗ್ಗೆ ಡೋಂಗಿ ಮಾತುಗಳನ್ನಾಡುತ್ತಾರೆ. ಗೋಮಾಂಸ ಎನ್ನುವುದು ಬಿಜೆಪಿಯ ಬೂಟಾಟಿಕೆ. ಗೋಮಾಂಸ ನಿಷೇಧದ ಹಾಗೆಯೇ ದತ್ತಪೀಠವನ್ನು ಸಹ ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಶಾಸಕ ಸಿ ಟಿ ರವಿ ಅವರು ದತ್ತಪೀಠ ವಿವಾದದಿಂದಲೇ ಮೂರು ಭಾರಿ ಶಾಸಕರಾಗಿದ್ದಾರೆ. ದತ್ತಪೀಠ ಗುಹೆ ಕಟ್ಟಲಾಗದ ಸಿಟಿ ರವಿ, 8 ಕೋಟಿ ರುಪಾಯಿ ಖರ್ಚು ಮಾಡಿ ಮನೆ ಕಟ್ಟಿಸಿಕೊಂಡಿದ್ದಾರೆ ಎಂದು ಮುತಾಲಿಕ್ ಕಿಡಿಕಾರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


