ರಾಜಕೀಯ

ಜಿದ್ದಾಜಿದ್ದಿನ ರಣರಂಗವಾಗಿದೆ ಚಾಮುಂಡೇಶ್ವರಿ-ವರುಣಾ: ಕಾಂಗ್ರೆಸ್ ಸೋಲಿಸಲು ಜೆಡಿಎಸ್, ಬಿಜೆಪಿ ಪಣ!

ಯತೀಂದ್ರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ವಿಜಯೆಂದ್ರ ಅವರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಲಾಗುತ್ತಿದೆ,...

ಜಿದ್ದಾಜಿದ್ದಿನ ರಣರಂಗವಾಗಿದೆ ಚಾಮುಂಡೇಶ್ವರಿ-ವರುಣಾ: ಕಾಂಗ್ರೆಸ್ ಸೋಲಿಸಲು ಜೆಡಿಎಸ್, ಬಿಜೆಪಿ ಪಣ!
ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ವಿಜಯೇಂದ್ರ ದಂಪತಿ
Published On :
ಮೈಸೂರು:  ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಚುನಾವಣಾ ಕಾವು ರಂಗೇರುತ್ತಿದೆ.  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ವರುಣಾ ಕ್ಷೇತ್ರದಲ್ಲಿ ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ದಿಸುತ್ತಿದ್ದಾರೆ. ಯತೀಂದ್ರ ವಿರುದ್ಧ ಬಿಜೆಪಿ  ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ವಿಜಯೆಂದ್ರ ಅವರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಲಾಗುತ್ತಿದೆ, ಹೀಗಾಗಿ ವರುಣಾ ಕ್ಷೇತ್ರದಲ್ಲಿ ಭಾರಿ ಹಣಾಹಣಿ ನಡೆಯಲಿದೆ. ಕಾಂಗ್ರೆಸ್ ಸೋಲಿಸಲು ಬಿಜೆಪಿ ಮತ್ತು ಜೆಡಿಎಸ್  ತಂತ್ರ ರೂಪಿಸುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದರ ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವುದರಿಂದ ಈ ಕ್ಷೇತ್ರಗಳ ಚುನಾವಣೆ ಮತ್ತಷ್ಟು ಮಹತ್ವ ಪಡೆದುಕೊಂಡಿದೆ, ತಮ್ಮ ಪುತ್ರನಿಗೆ ವರುಣಾ ಕ್ಷೇತ್ರ ಬಿಟ್ಟುಕೊಟ್ಟಿರುವ ಸಿದ್ದರಾಮಯ್ಯ ಚಾಮುಂಡೇಶ್ವರಿಯಿಂದ ಸ್ಪರ್ಧಿಸಿಲಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಬಿರುಸಿನ ಪ್ರಚಾರ ಆರಂಭಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅತಿ ಹೆಚ್ಚಿನ ಮತ ಪಡೆದು ಅಲ್ಲಿಂದಲೇ ತಮ್ಮ ರಾಜಕೀಯ ಜೀವನ ಅಂತ್ಯಗೊಳಿಸಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ, 
ಆದರೆ ಸಿದ್ದರಾಮಯ್ಯ ಅವರ ಈ ಆಕಾಂಕ್ಷೆಗೆ ತಣ್ಣೀರೆರೆಚಲು ಅವರ ಸ್ನೇಹಿತನಾಗಿದ್ದ ಹಾಗೂ ಈಗ ಶತ್ರುವಾಗಿ ಪರಿಗಣಿಸಲ್ಪಟ್ಟಿರುವ ಜಿ.ಟಿ ದೇವೇಗೌಡ ತೆರೆಮರೆಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ರಣತಂತ್ರ ರೂಪಿಸುತ್ತಿದ್ದಾರೆ.  ಒಕ್ಕಲಿಗ ಸಮುದಾಯಕ್ಕೆ ಸೇರಿರುವ ಜಿ.ಟಿ ದೇವೇಗೌಡ ದಲಿತ ಮತ್ತು ನಾಯಕ ಸಮುದಾಯವನ್ನು ತಮ್ಮತ್ತ ಸೆಳೆಯಲು ಬಲೆ ಬೀಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಚುನಾವಣಾ ಪ್ರಚಾರ ಕಾರ್ಯವೈಖರಿಯನ್ನು ತೀರಾ ಸಮೀಪದಿಂದ ಗಮಿನಿಸುತ್ತಿರುವ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್,ಡಿ ದೇವೇಗೌಡ ಮಂಗಳವಾರದಿಂದ ಚಾಮುಂಡೇಶ್ವರಿ ಕ್ಷೇತದಿಂದ ಪ್ರವಾಸ ಆರಂಭಿಸಲಿದ್ದಾರೆ, ವೀರಶೈವ ಮಠ ಹಾಗೂ ದಲಿತ ಕಾಲೋನಿ, ನಾಯಕ್ ಬೀದಿಗಳಿಗೆ ಭೇಟಿ ನೀಡಲು ಜೆಡಿಎಸ್ ಯೋಜನೆ ರೂಪಿಸಿದೆ. 
ಇನ್ನೂ ವರುಣಾ ಕ್ಷೇತ್ರದ ಬಿಜೆಪಿ ಘಟಕ ಕೈಕಟ್ಟಿ ಕೂತಿಲ್ಲ, ಯತೀಂದ್ರ ಅವರನ್ನು ಸೋಲಿಸಲು  ವಿಜಯೇಂದ್ರ ಅವರಿಗಿಂತ ಸಮರ್ಥ ಅಭ್ಯರ್ಥಿ ಬೇರೊಬ್ಬರಿಲ್ಲ ಎಂದು ಹೇಳುತ್ತಿದೆ, ಹೀಗಾಗಿ ವಿಜಯೇಂದ್ರ ಕೂಡ  ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಮೈಸೂರಿನಲ್ಲಿ ತಮ್ಮ ರಾಜಕೀಯ ಜಿವನ ಆರಂಭಸಿದ್ದಾರೆ, ಜೆಎಸ್ ಎಸ್ ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ವಿಜಯೇಂದ್ರ ದಂಪತಿ ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ.
ಒಂದು ವೇಳೆ ಪಕ್ಷದ ಹೈಕಮಾಂಡ್ ತಮಗೆ ಟಿಕೆಟ್ ನೀಡಿದರೇ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದಾರೆ,  ಇನ್ನೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಬಳಿ ವಿಜಯೇಂದ್ರ ಅವರಿಗೆ ಟಿಕೆಟ್ ಗಾಗಿ ಮನವಿ ಸಲ್ಲಿಸಿರುವ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಅವರ ಹಣ ಹಾಗೂ ಅಧಿಕಾರ ಬಲವನ್ನು ಸೋಲಿಸಲು ವಿಜಯೇಂದ್ರ ಸಮರ್ಥ ಅಭ್ಯರ್ಥಿ ಎಂದು ಹೇಳಿದ್ದಾರೆ.
ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಇಬ್ಬೂರಿಗೂ ಸಿಎಂ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಯಸಿದ್ದಾರೆ,  ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ 30 ಸೀಟುಗಳನ್ನು ಪಡೆಯಲು ಸಾಧ್ಯವಿಲ್ಲ ಎಂದು ಲೇವಡಿ ಮಾಡಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಹಗೆ ತೀರಿಸಿಕೊಳ್ಳಲು ದೇವೇಗೌಡ ಮತ್ತು ಕುಮಾರ ಸ್ವಾಮಿ ನಿರ್ಧರಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.