ಚುನಾವಣಾ ಪಾಂಚಜನ್ಯ ಮೊಳಗಿದೆ ಕರ್ನಾಟಕದಲ್ಲಿ: ಮಾಜಿ ಸಿಎಂ ಎಸ್.ಎಂ ಕೃಷ್ಣ ಎಲ್ಲಿ?
ಇತ್ತೀಚೆಗೆ ನಡೆದ ಯಾವುದೇ ರ್ಯಾಲಿ ಅಥವಾ ಮಂಡ್ಯದಲ್ಲಿ ಪ್ರದಾನಿ ಮೋದಿ ಭಾಗವಹಿಸಿದ್ದ ಪರಿವರ್ತನಾ ಯಾತ್ರೆಗಳಲ್ಲಿ ಕೃಷ್ಣ ಕಾಣಿಸಿಕೊಂಡಿಲ್ಲ, ...

Published On :
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಸರಿಸುಮಾರು 1 ವರ್ಷ ಸಮಯವಾಯಿತು. ಕೃಷ್ಣ ಬಿಜೆಪಿ ಸೇರ್ಪಡೆಯಿಂದ
ಸುಮಾರು 28 ವಿಧಾನಸಭೆ ಕ್ಷೇತ್ರಗಳಲ್ಲಿ ಅನುಕೂಲವಾಗಲಿದೆಯೆಂದು ಪಕ್ಷ ನಂಬಿತ್ತು.
ಹಳೇ ಮೈಸೂರು ಭಾಗದಲ್ಲಿ ಕೃಷ್ಣ ಅವರಿಂದ ಭಾರೀ ಅನುಕೂಲವಾಗಲಿದೆಯೆಂದು ನಂಬಲಾಗಿತ್ತು, ಆದರೆ ಹಿರಿಯ ನಾಯಕ ಎಸ್ ಎಂ ಕೃಷ್ಣ ಬಿಜೆಪಿ ವಿಧಾನಸಭೆ ಚುನಾವಣಾ ಸಿದ್ಧತೆಗಳಿಂದ ದೂರವೇ ಉಳಿದಿದ್ದಾರೆ, ಮಿಷನ್ 150 ಗೂ ತಮಗೂ ಸಂಬಂಧವೇ ಇಲ್ಲ ಎಂಬಂತಿದ್ದಾರೆ.
ಇತ್ತೀಚೆಗೆ ನಡೆದ ಯಾವುದೇ ರ್ಯಾಲಿ ಅಥವಾ ಮಂಡ್ಯದಲ್ಲಿ ಪ್ರದಾನಿ ಮೋದಿ ಭಾಗವಹಿಸಿದ್ದ ಪರಿವರ್ತನಾ ಯಾತ್ರೆಗಳಲ್ಲಿ ಕೃಷ್ಣ ಕಾಣಿಸಿಕೊಂಡಿಲ್ಲ, ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣೆ ವೇಳೆ ನಡೆದ ಪ್ರಚಾರದಲ್ಲಿ ಮಾತ್ರ ಕೃಷ್ಣ ಕಾಣಸಿಕೊಂಡಿದ್ದರು, ಬಿಜೆಪಿಗೆ ಸೇರಿದ ನಂತರ ಕೇವಲ ಒಮ್ಮೆ ಮಾತ್ರ ಪಕ್ಷದ ಕಚೇರಿಗೆ ಭೇಟಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜೊತೆಗೆ ಪಕ್ಷದಲ್ಲಿ ಕೃಷ್ಣ ಅವರಿಗೆ ಯಾವುದೇ ಹುದ್ದೆ ನೀಡಿಲ್ಲ,
1999 ರ ನಂತರ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಜೊತೆಗೆ ತಾವು ಸಿಎಂ ಆಗಿದ್ದ ವೇಳೆ ಐಟಿ ಸಿಟಿ ಅಭಿವೃದ್ಧಿಗೂ ಹೆಚ್ಚಿನ ಒತ್ತು ನೀಡಿದ್ದರು.
ಕಳೆದ ಕೆಲವು ತಿಂಗಳಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಲವು ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದಾರೆ, ಪಕ್ಷವನ್ನು ಸಂಘಟಿಸಲು ಪಕ್ಷದ ಪ್ರಮುಖ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ, ಆದರೆ ಈ ಯಾವುದೇ ಕಾರ್ಯತಂತ್ರ ರೂಪಿಸುವಾಗ ಎಸ್ ಎಂ ಕೃಷ್ಣ ಅವರಿಗೆ ಆಹ್ವಾನ ನೀಡಿರಲಿಲ್ಲ.
ಕೃಷ್ಣ ಅವರು ಹಿರಿಯ ನಾಯಕ ಅವರಿಂದ ಪಕ್ಷಕ್ಕೆ ಹೆಚ್ಚಿನ ಲಾಭವಾಗಲಿದೆ , ಪಕ್ಷ ಅವರನ್ನು ಸೂಕ್ತ ಕಾಲದಲ್ಲಿ ಬಳಸಿಕೊಳ್ಳಲಿದೆ ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.
ಅಭ್ಯರ್ಥಿಗಳ ಆಯ್ಕೆ ಸಭೆ ವೇಳೆ ಪಕ್ಷದ ಎಲ್ಲಾ ಮುಖಂಡರು ಭಾಗವಹಿಸಿದ್ದರು, ಆದರೆ ಕೃಷ್ಣ ಮಾತ್ರ ಎಲ್ಲಿಯೂ ಕಾಣಿಸಿಕೊಂಡಿಲ್ಲ, ಜೊತೆಗೆ ಅಮಿತ್ ಶಾ ಮಂಡ್ಯದಲ್ಲಿ ಇತ್ತೀಚೆಗೆ ನಡೆಸಿದ ರ್ಯಾಲಿ ವೇಳೆಯಲ್ಲಿಯೂ ಕೂಡ ಕೃಷ್ಣ ಎಲ್ಲಿಯೂ ಕಾಣಿಸಿಕೊಂಡಿಲ್ಲ, ಬಿಜೆಪಿಯಲ್ಲಿ ಕೃಷ್ಣ ಅವರಿಗೆ ಸೂಕ್ತ ಸ್ಥಾನ ನೀಡದಿರುವುದೇ ಈ ಅಸಮಾಧಾನಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ,
ಆದರೆ ಈ ಆರೋಪವನ್ನು ನಿರಾಕರಿಸಿರುವ ಬಿಜೆಪಿ ನಾಯಕರು, ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರು ಚುನಾವಣಾ ಪ್ರಣಾಳಿಕೆ ಸಿದ್ಧತೆ ತಯಾರಿಸುವಾಗ ಅವರ ಸಲಹೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ, ಒಕ್ಕಲಿಗ ಸಮುದಾಯ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಪ್ರಚಾರ ನಡೆಸಲು ಬರಲಿದ್ದಾರೆ ಎಂದು ಹೇಳಲಾಗಿದೆ.
ಬಿಜೆಪಿಗೆ ಸೇರುವ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರನ್ನು ಹಾಡಿಹೊಗಳಿದ್ದರು, ಆದರೆ ಕೃಷ್ಣ ಬಿಜೆಪಿ ಸೇರಿದ ಆರು ತಿಂಗಳಲ್ಲಿ ಆದಾಯ ತೆರಿಗೆ ಇಲಾಖೆ ಕೃಷ್ಣ ಅವರ ಅಳಿಯ ಸಿದ್ದಾರ್ಥ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿತ್ತು,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


