ರಾಜಕೀಯ

ಪಕ್ಷದಲ್ಲಿ ತಲೆ ಹಿಡುಕರಿಗೆ, ಚೇಲಾಗಳಿಗೆ ಮಾತ್ರ ಆದ್ಯತೆ': ಕಾಂಗ್ರೆಸ್ ಮುಖಂಡ ಪಿ.ಎಚ್ ನೀರಲಕೇರಿ

: ತಲೆ ಹಿಡುಕರು ಹಾಗೂ ಚೇಲಾಗಲಿಗೆ ಮಾತ್ರವೇ ಪಕ್ಷದಲ್ಲಿ ಪ್ರಾಮುಖ್ಯತೆ. ಪಕ್ಷಕ್ಕಾಗಿ ದುಡಿಯುವವರಿಗೆ ಯಾವುದೇ ಆದ್ಯತೆಯಿಲ್ಲ ಎಂದು ಕಾಂಗ್ರೆಸ್ ಮುಖಂಡ...

ಪಕ್ಷದಲ್ಲಿ ತಲೆ ಹಿಡುಕರಿಗೆ, ಚೇಲಾಗಳಿಗೆ ಮಾತ್ರ ಆದ್ಯತೆ': ಕಾಂಗ್ರೆಸ್ ಮುಖಂಡ ಪಿ.ಎಚ್ ನೀರಲಕೇರಿ
ಪಿ.ಎಚ್. ನೀರಲಕೇರಿ
Published On :
ಹುಬ್ಬಳ್ಳಿ: ತಲೆ ಹಿಡುಕರು ಹಾಗೂ ಚೇಲಾಗಲಿಗೆ ಮಾತ್ರವೇ ಪಕ್ಷದಲ್ಲಿ ಪ್ರಾಮುಖ್ಯತೆ. ಪಕ್ಷಕ್ಕಾಗಿ ದುಡಿಯುವವರಿಗೆ ಯಾವುದೇ ಆದ್ಯತೆಯಿಲ್ಲ ಎಂದು ಕಾಂಗ್ರೆಸ್ ಮುಖಂಡ ಪಿ.ಎಚ್ ನೀರಲಕೇರಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಶಿವಮೊಗ್ಗಕ್ಕೆ ತೆರಳುತ್ತಿದ್ದ ರಾಹುಲ್​ ಗಾಂಧಿಯನ್ನು ಭೇಟಿ ಮಾಡಲು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ  ನಿರಲಕೇರಿ ಹೋಗಿದ್ದರು, ಆದರೆ ಅವರನ್ನು ಒಳಗೆ ಪ್ರವೇಶಿಸದಂತೆ ಹಿರಿಯ ಮುಖಂಡ  ಕೆ,ಎನ್ ರೆಡ್ಡಿ ಅಡ್ಡಿ ಪಡಿಸಿದ್ದಾರೆ, ಅವರಿಗೆ ಪ್ರವೇಶ ನೀಡದ ಕಾರಣ ಈ ರೀತಿ ಅಸಮಾಧಾನ ಹೊರ ಹಾಕಿದ್ದಾರೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ರಾಜ್ಯಕ್ಕೆ ಆಗಮಿಸಿದಾಗ ಜಿಲ್ಲೆಯ ಕಾರ್ಯಕರ್ತರು ಹಾಗೂ ಮುಖಂಡರುಗಳು ಜೊತೆ ಸಭೆ ನಡೆಸುವುದು ಹಾಗೂ ಅದಕ್ಕೆ ಬೇಕಾದ ಸಿದ್ಧತೆ ನಡೆಸಬೇಕಾಗಿರುತ್ತದೆ, ಆದರೆ ಇಂದು ಹಿರಿಯ ನಾಯಕರು ರಾಹುಲ್ ಗಾಂಧಿಯನ್ನು  ಭೇಟಿ ಮಾಡಲು ಅವಕಾಶ ನೀಡಲಿಲ್ಲ ಎಂದು ಆರೋಪಿಸಿದ್ದಾರೆ.
ತಮಗೆ ವಿಮಾನ ನಿಲ್ದಣ ಪ್ರವೇಶಿಸಲು ಅವಕಾಶ ನೀಡಲಿಲ್ಲ ಎಂಬ ಕೋಪದಲ್ಲಿ ಕೆಲ ಕೆಟ್ಟ ಪದಗಳನ್ನು ಬಳಕೆ ಮಾಡಿದ್ದೆ, ಅದಕ್ಕಾಗಿ ನಾನು ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ. ಪ್ರಾಮಾಣಿಕ ಕಾರ್ಯಕರ್ತರಿಗೆ ಪಕ್ಷದಲ್ಲಿ ಆದ್ಯತೆ ನೀಡುತ್ತಿಲ್ಲ, ಕಡೆಗಣಿಸುತ್ತಿದ್ದಾರೆ ಎಂದು ದೂರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.