ತಪ್ಪಿದ ಕಾಗಿನೆಲೆ ಶ್ರೀಗಳ ಭೇಟಿ: ಈಶ್ವರಪ್ಪ ವಿರುದ್ಧ ಅಮಿತ್ ಶಾ ಕೆಂಡಾಮಂಡಲ!
ಕಾಗಿನೆಲೆ ಪೀಠದ ನಿರಂಜನಾನಂದ ಪುರಿ ಸ್ವಾಮಿ ಅವರ ಜೊತೆ ಭೇಟಿ ಏರ್ಪಡಿಸದಿದ್ದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿಧಾನ ಪರಿಷತ್ ಪ್ರತಿ ಪಕ್ಷ ...

Published On :
ಬೆಂಗಳೂರು: ಕಾಗಿನೆಲೆ ಪೀಠದ ನಿರಂಜನಾನಂದ ಪುರಿ ಸ್ವಾಮಿ ಅವರ ಜೊತೆ ಭೇಟಿ ಏರ್ಪಡಿಸದಿದ್ದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿಧಾನ ಪರಿಷತ್ ಪ್ರತಿ ಪಕ್ಷ ನಾಯಕ ಕೆಎಸ್ ಈಶ್ವರಪ್ಪ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಮಿತ್ ಶಾ ಅವರು ತಮ್ಮ ಪ್ರವಾಸದ ಅವಧಿಯಲ್ಲಿ ಮಂಗಳವಾರ ಕಾಗಿನೆಲೆ ಶ್ರೀ ನಿರಂಜನಾನಂದ ಪುರಿಗಳನ್ನು ಭೇಟಿ ಮಾಡಲು ಇಚ್ಛಿಸಿದ್ದರು ಹೀಗಾಗಿ ಆಮಿತ್ ಶಾ ಕಾಗಿನೆಲೆ ಪೀಠಕ್ಕೆ ತೆರಳಿದ್ದರು, ಆದರೆ ಈ ವೇಳೆಗೆ ಶ್ರೀಗಳು ದಾವಣಗೆರೆಯಲ್ಲಿ ಪ್ರವಾಸದಲ್ಲಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ತೆರಳಿದ್ದರು.
ಕುರುಬ ಸಮುದಾಯದ ಪ್ರಮುಖ ನಾಯಕರಾಗಿರುವ ಈಶ್ವರಪ್ಪ ಅವರು ಕಾಗಿನೆಲೆ ಶ್ರೀಗಳ ಜೊತೆ ಸಭೆ ಆಯೋಜಿಸಿದ ಹಿನ್ನೆಲೆಯಲ್ಲಿ ಅಮಿತ್ ಶಾ ಈಶ್ವರಪ್ಪ ವಿರುದ್ಧ ಕೆಂಡಾಮಂಡವಲವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಮಿತ್ ಶಾ ಕಾಗಿನೆಲೆ ಪೀಠದಕ್ಕೆ ಭೇಟಿ ನೀಡಿದ್ದ ವೇಳೆ ಪೀಠದ ಕಿರಿಯ ಸ್ವಾಮೀಜಿ ಅಮೋಘ ಸಿದ್ದೇಶ್ವರ ಸ್ವಾಮೀಜಿ, ತಿಂಥಿನಿ ಶಾಖಾಮಠದ ಸಿದ್ದರಾಮಾನಂದಪುರಿ ಸ್ವಾಮೀಜಿ ಹಾಗೂ ಬೆಂಗಳೂರಿನ ಕೆಲೊಡಿ ಶಾಖಾ ಮಠದ ಈಶ್ವರಾನಂದ ಪುರಿ ಅವರುಗಳು ಮಾತ್ರ ಗುರುಪೀಠದಲ್ಲಿ ಹಾಜರಿದ್ದರು. ಬಿಜೆಪಿ ಮುಖಂಡರನ್ನು ಕಿರಿಯ ಸ್ವಾಮೀಜಿಗಳು ಬರಮಾಡಿಕೊಂಡರು. ಸುಮಾರು 15 ನಿಮಿಷಗಳ ಕಾಲ ಪೀಠದಲ್ಲಿ ಕಾಲ ಕಳೆದ ಶಾ ಮತ್ತು ಅವರ ತಂಡ, ಮೂವರು ಶ್ರೀಗಳ ಜೊತೆ ಚರ್ಚೆ ನಡೆಸಿದರು.
ಶ್ರೀಗಳು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರಿಂದ ರಾಜ್ಯ ಬಿಜೆಪಿ ನಾಯಕರು ಮುಖಭಂಗಕ್ಕೆ ಒಳಗಾಗಿದ್ದಾರೆ ಎನ್ನಲಾಗಿದ್ದು, ಶ್ರೀಗಳ ಜೊತೆಗಿನ ಭೇಟಿ ತಪ್ಪಿಸಲು ಸಿಎಂ ಸೇರಿದಂತೆ ಹಲವರು ಕೈವಾಡ ನಡೆಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
K S Eshwarappaಕೆ.ಎಸ್ ಈಶ್ವರಪ್ಪAmit Shahಅಮಿತ್ ಶಾKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆKaginele mutt seerಕಾಗಿನೆಲೆ ಮಠದ ಶ್ರೀಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


