ರಾಜಕೀಯ

ಜನಾರ್ದನ ರೆಡ್ಡಿಗೂ ನಮಗೂ ಸಂಬಂಧವಿಲ್ಲ ಎಂಬ ಶಾ ಹೇಳಿಕೆ: ರೆಡ್ಡಿಗೆ ರಾಜ್ಯ ಬಿಜೆಪಿ ನಾಯಕರ ಸಮಾಧಾನ?

ಅಮಿತ್ ಶಾ ಹೇಳಿಕೆಯಿಂದ ಅಸಮಾಧಾನಗೊಂಡಿರುವ ಬಳ್ಳಾರಿ ಗಣಿದಣಿ ಗಾಲಿ ಜನಾರ್ಧನ ರೆಡ್ಡಿ ಅವರನ್ನು ಸಮಾಧಾನಗೊಳಿಸಲು ರಾಜ್ಯ ಬಿಜೆಪಿ ನಾಯಕರು ...

ಜನಾರ್ದನ ರೆಡ್ಡಿಗೂ ನಮಗೂ ಸಂಬಂಧವಿಲ್ಲ ಎಂಬ ಶಾ ಹೇಳಿಕೆ: ರೆಡ್ಡಿಗೆ ರಾಜ್ಯ ಬಿಜೆಪಿ ನಾಯಕರ ಸಮಾಧಾನ?
ಜನಾರ್ದನ ರೆಡ್ಡಿ
Published On :
ಬೆಂಗಳೂರು: ಅಮಿತ್ ಶಾ ಹೇಳಿಕೆಯಿಂದ ಅಸಮಾಧಾನಗೊಂಡಿರುವ ಬಳ್ಳಾರಿ ಗಣಿದಣಿ ಗಾಲಿ ಜನಾರ್ಧನ ರೆಡ್ಡಿ ಅವರನ್ನು ಸಮಾಧಾನಗೊಳಿಸಲು ರಾಜ್ಯ ಬಿಜೆಪಿ ನಾಯಕರು ಮುಂದಾಗಿದ್ದಾರೆ.
ಪಕ್ಷದಲ್ಲಿರುವ ರೆಡ್ಡಿ ನಿಷ್ಠರಿಗೆ ಅಮಿತ್ ಶಾ ಹೇಳಿಕೆಯಿಂದ ಆಘಾತವಾಗಿದೆ ಜೊತೆಗೆ ಅಸಮಾಧಾನದ ಹೊಗೆಯೂ ಎದ್ದಿದೆ. ಬಿಜೆಪಿಯ ಬಳ್ಳಾರಿ ಸಂಸದ ಶ್ರೀರಾಮುಲು ಸೇರಿದಂತೆ ಹಲವರು ಅಮಿತ್ ಶಾ ಹೇಳಿಕೆಗೆ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.
2008 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಬಳ್ಳಾರಿಯ ರೆಡ್ಡಿ ಸಹೋದರರು ಹಾಗೂ ಬಿ. ಶ್ರೀರಾಮುಲು ಪ್ರಮುಖ ಪಾತ್ರ ವಹಿಸಿದ್ದರು. ಇನ್ನೂ ಈ ಸಂಬಂಧ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಪಕ್ಷದ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ. 
ಆದರೆ ಪಕ್ಷದಿಂದ ರೆಡ್ಡಿ ಸಹೋದರರಿಗೆ ಟಿಕೆಟ್ ನೀಡುವ ಸಂಬಂಧ ಪ್ರತಿಕ್ರಿಯಿಸಿದ ಅವರು, ದೋಷಿಗಳಿಗೆ ಯಾವುದೇ ಕಾರಣಕ್ಕೂ ಪಕ್ಷದ ಟಿಕೆಟ್ ಸಿಗುವುದಿಲ್ಲ ಎಂದು ತಿಳಿಸಿದ್ದಾರೆ.
ಬಳ್ಳಾರಿಯ ಹಲವು ಭಾಗದ ಜನರಿಗೆ ರೆಡ್ಡಿ ಎಂದರೇ ಅಚ್ಚು ಮೆಚ್ಚು,  ಬಳ್ಳಾರಿ ಚಿತ್ರದುರ್ಗ ಸೇರಿದಂತೆ ಸುತ್ತಮುತ್ತಲ ಹಲವು ಜಿಲ್ಲೆಗಳಲ್ಲಿ ಜನಾರ್ಧನ ರೆಡ್ಡಿ ಪ್ರಭಾವ ಹೆಚ್ಚಿದ್ದು ಶಾ ಹೇಳಿಕೆ ಅಸಮಾಧಾನ ತಂದಿದೆ. ಈ ಹಂತದಲ್ಲಿ ಬಳ್ಳಾರಿಯಲ್ಲಿ ಬಿಜೆಪಿಯಿಂದ ಬೇರೆ ಅಭ್ಯರ್ಥಿಗಳು ಕಣಕ್ಕಿಳಿದರೇ ಪಕ್ಷಕ್ಕೆ ಹಾನಿಯಾಗುವುದು ಖಚಿತವಾಗಿದೆ. 
ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಬಳ್ಳಾರಿಯಲ್ಲಿಯಿಂದ ಸ್ಪರ್ದಿಸುವ ಬಿಜೆಪಿ ಅಭ್ಯರ್ಥಿ ಗಳ ಗೆಲುವಿಗೆ ತೊಂದರೆ ಉಂಟು ಮಾಡಬಹುದು ಎಂದು ಊಹಿಸಲಾಗಿದೆ. 
ಬಳ್ಳಾರಿ ಮೇಲೆ  ತೀವ್ರವಾಗಿ ಹಿಡಿತ ಸಾಧಿಸಿರುವ ಬಿಜೆಪಿ ಸಂಸದ ಶ್ರೀರಾಮುಲು ಈ ಮೊದಲು ತಮ್ಮ ಸ್ನೇಹಿತ ಜನಾರ್ದನ ರೆಡ್ಡಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುವುದಾಗಿ ಹೇಳಿದ್ದರು, ಆದರೆ ಸದ್ಯ ಈ ಸಂಬಂಧ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.