ರಾಜಕೀಯ

ಪ್ರಧಾನಿ ಮೋದಿ ವಿರುದ್ಧ ಪ್ರಚೋದನಾಕಾರಿ ಹೇಳಿಕೆ: ಜಿಗ್ನೇಶ್‌ ಮೇವಾನಿ ವಿರುದ್ಧ ಎಫ್ಐಆರ್ ದಾಖಲು

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಗುಜರಾತ್‌...

ಪ್ರಧಾನಿ ಮೋದಿ ವಿರುದ್ಧ ಪ್ರಚೋದನಾಕಾರಿ ಹೇಳಿಕೆ: ಜಿಗ್ನೇಶ್‌ ಮೇವಾನಿ ವಿರುದ್ಧ ಎಫ್ಐಆರ್ ದಾಖಲು
ಜಿಗ್ನೇಶ್ ಮೇವಾನಿ
Published On :
ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಗುಜರಾತ್‌ ಶಾಸಕ, ದಲಿತ ನಾಯಕ ಜಿಗ್ನೇಶ್‌ ಮೇವಾನಿ ಅವರ ವಿರುದ್ಧ ಕೇಸು ದಾಖಲಿಸಲಾಗಿದೆ.
ಚಿತ್ರದುರ್ಗ ಬಿಜೆಪಿ ಜಿಲ್ಲಾ ಅಧ್ಕ್ಷಕ್ಷ ಕೆಎಸ್ ನವೀನ್ ಅವರು ನೀಡಿದ ದೂರಿನ ಆಧಾರದ ಮೇಲೆ ಜಿಗ್ನೇಶ್ ಮೇವಾನಿ ಹಾಗೂ ಕೋಮು ಸೌಹಾರ್ದ ವೇದಿಕೆಯ ಜಿಲ್ಲಾ ಸಂಚಾಲಕ ಟಿ. ಷಫೀಉಲ್ಲಾ ಅವರ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಅಲ್ಲದೆ ನವೀನ್ ಅವರು ಗುಜರಾತ್ ಶಾಸಕನ ವಿರುದ್ಧ ಚುನಾವಣಾ ಆಯೋಗಕ್ಕೂ ದೂರು ನೀಡಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ.
ಶುಕ್ರವಾರ ನಡೆದ 'ಸಂವಿಧಾನ ಉಳಿವಿಗಾಗಿ ಕರ್ನಾಟಕ' ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮೇವಾನಿ, ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದಾಗ ಕುರ್ಚಿಗಳನ್ನು ತೂರಿ, ಗದ್ದಲ ಮಾಡಿ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಗುಜರಾತ್‌ ಶಾಸಕರು ನೀಡಿರುವ ಹೇಳಿಕೆ ಅತ್ಯಂತ ಬೇಜವಾಬ್ದಾರಿಯುತವಾಗಿದ್ದು, ಪ್ರಚೋದನಾತ್ಮಕವಾಗಿದೆ, ವಿವಾದಯುತವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಜಿಗ್ನೇಶ್ ಮೇವಾನಿ ವಿರುದ್ಧ ಶಾಂತಿ ಭಂಗ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.