ರಾಜಕೀಯ

ದೇಶದಲ್ಲಿ ಅಮಿತ್ ಶಾ, ಮೋದಿ ಮಾತ್ರ ಮನುಷ್ಯರಾ?: ರಾಹುಲ್ ಗಾಂಧಿ

ಪ್ರತಿಪಕ್ಷಗಳನ್ನು ಪ್ರಾಣಿಗಳಿಗೆ ಹೋಲಿಸಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ...

ದೇಶದಲ್ಲಿ ಅಮಿತ್ ಶಾ, ಮೋದಿ ಮಾತ್ರ ಮನುಷ್ಯರಾ?: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published On :
ಕೋಲಾರ: ಪ್ರತಿಪಕ್ಷಗಳನ್ನು ಪ್ರಾಣಿಗಳಿಗೆ ಹೋಲಿಸಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ತೀವ್ರ ವಾಗ್ದಾಳಿ ನಡೆಸಿದ್ದು, ಬಿಜೆಪಿ ಅಧ್ಯಕ್ಷರ ಅಗೌರವಯುತ ಹೇಳಿಕೆ ಅವರ ಮನಸ್ಥಿತಿಯನ್ನು ತೋರಿಸುತ್ತದೆ ಎಂದಿದ್ದಾರೆ.
ಇಂದು ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಎಲ್ಲಾ ಪ್ರತಿಪಕ್ಷಗಳನ್ನು ಪ್ರಾಣಿಗಳಿಗೆ ಹೋಲಿಸಿದ ಬಿಜೆಪಿ ಅಧ್ಯಕ್ಷರ ಪ್ರಕಾರ,  ದೇಶದಲ್ಲಿ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಇಬ್ಬರು ಮಾತ್ರ ಮನುಷ್ಯರು. ಬೇರೆಯವರೆಲ್ಲಾ ಪ್ರಾಣಿಗಳಾ ಎಂದು ಖಾರವಾಗಿಯೇ ಪ್ರಶ್ನಿಸಿದರು.
ದೇಶದೆಲ್ಲೆಡೆ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ದಲಿತರ ಮೇಲೆ ದೌರ್ಜನ್ಯ ಖಂಡನೀಯ. ಆದರೆ, ನಮ್ಮ ಪ್ರಧಾನಿ ಮಾತ್ರ ಈ ಬಗ್ಗೆ ಮಾತೇ ಆಡುತ್ತಿಲ್ಲ. ಅಂಬೇಡ್ಕರ್ ಪ್ರತಿಮೆ ಮುಂದೆ ಹೋಗಿ ನಮಸ್ಕಾರ ಮಾಡ್ತಾರೆ. ಆದರೆ, ಅಂಬೇಡ್ಕರ್ ಯಾವುದರ ಪರವಾಗಿ ಇದ್ದರೋ ಅದನ್ನೇ ನಾಶ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇದೇ ವೇಳೆ ನರೇಂದ್ರ ಮೋದಿ ಸರ್ಕಾರ ಸಂವಿಧಾನ ಬದಲಾವಣೆ ಮಾಡಲು ಹೋದರೆ ದೇಶದಾದ್ಯಂತ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ರಾಹುಲ್ ಗಾಂಧಿ ಎಚ್ಚರಿಕೆ ನೀಡಿದರು.
ಮೋದಿ ಬ್ಯಾಂಕ್ ಲೂಟಿಕೋರರ ಪರವಾಗಿ ಇದ್ದಾರೆ. ನೀರವ್ ಮೋದಿ, ಲಲಿತ್ ಮೋದಿ, ವಿಜಯ್ ಮಲ್ಯಗೆ ಮೋದಿ ಬೆಂಬಲವಿದೆ. ಲೂಟಿಕೋರಿಗೆ ಎಷ್ಟು ಬೇಕಾದರೂ ಸಾಲ ಕೊಡುತ್ತಾರೆ. ಇನ್ನೊಂದೆಡೆ ರೈತರ ಸಾಲ ಮನ್ನಾ ಮಾಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಟೀಕಿಸಿದರು. 
6ನೇ ಬಾರಿಗೆ ರಾಜ್ಯ ಪ್ರವಾಸ ಕೈಗೊಂಡಿರುವ  ಕಾಂಗ್ರೆಸ್​ ಅಧ್ಯಕ್ಷ ರಾಹುಲ್  ​ಗಾಂಧಿ ಇಂದು ಕೋಲಾರ, ಚಿಕ್ಕಬಳ್ಳಾಪುರದಲ್ಲಿ ರಾಹುಲ್ ರ್ಯಾ ಲಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.