ಕಾಂಗ್ರೆಸ್ ಗೆ ಮತ ನೀಡಿ: ಲಿಂಗಾಯತರಿಗೆ ಮಾತೆ ಮಹಾದೇವಿ ಕರೆ
ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಗೆ ಮತ ನೀಡುವಂತೆ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ.....

Published On :
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಗೆ ಮತ ನೀಡುವಂತೆ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಅವರು ಶನಿವಾರ ಬಹಿರಂಗವಾಗಿಯೇ ಲಿಂಗಾಯತರಿಗೆ ಕರೆ ನೀಡಿದ್ದಾರೆ.
ಚಾಲುಕ್ಯ ವೃತ್ತದ ಬಳಿ ಇರುವ ಬಸವ ಮಂಟಪದಲ್ಲಿ ನಡೆದ ಜಾಗತಿಕ ಲಿಂಗಾಯತ ಮಹಾಸಭಾದಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಎಲ್ಲಾ ಲಿಂಗಾಯತರು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅವರನ್ನು ಬೆಂಬಲಿಸಬೇಕು ಎಂದು ಮಾತೆ ಮಹಾದೇವಿ ಮನವಿ ಮಾಡಿದ್ದಾರೆ.
ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಮೌನ ನಮಗೆ ಯಾವುದೇ ಬೆಂಬಲ ನೀಡಲಿಲ್ಲ. ಇನ್ನು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಲಿಂಗಾಯತ ಧರ್ಮದ ಬಗ್ಗೆ ನೀಡಿರುವ ಹೇಳಿಕೆಗಳಲ್ಲಿ ಗೊಂದಲವಿದೆ ಎಂದು ಮಾತೆ ಮಹಾದೇವಿ ಹೇಳಿದ್ದಾರೆ. ಅಲ್ಲದ ಅಮಿತ್ ಶಾ ಅವರೇ ನೀವು ಜೈನ ಧರ್ಮದವರು , ಭಾರತದ ಐಕ್ಯತೆಗೆ ಭಂಗ ತಂದಿದ್ದೀರಾ? ದೇಶ ಒಡೆದಿದ್ದೀರಾ? ಬೌದ್ಧ ಧರ್ಮವು ಹಿಂದೂ ಧರ್ಮ ಮತ್ತು ದೇಶವನ್ನು ಒಡೆದಿದೆಯೇ? ಎಂದು ಪ್ರಶ್ನಿಸಿದ್ದು, ಲಿಂಗಾಯತ ಹಿಂದೂ ಧರ್ಮ ವಿರೋಧಿಯಲ್ಲ, ಅದಕ್ಕಿಂತ ಭಿನ್ನ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


