ರಾಜಕೀಯ

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯುಟಿ ಖಾದರ್ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ...

Published On :
ಮಂಗಳೂರು: ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯುಟಿ ಖಾದರ್ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಮಯದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಎರಡು ಕೋಮುಗಳ ಮಧ್ಯೆ ಘರ್ಷಣೆಯನ್ನು ಉಂಟು ಮಾಡುವಂತಹ ಪ್ರಚೋದನಕಾರಿ ಹೇಳಿಕೆ ನೀಡಿದ್ದು,  ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ನಾಯಕರು ಚುನಾವಣಾಧಿಕಾರಿ ವೈಶಾಲಿ ಅವರಿಗೆ ದೂರು ನೀಡಿದ್ದಾರೆ.
ಚುನಾವಣೆ ಮುಗಿಯುವವರೆಗೆ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಒತ್ತಾಯಿಸಿದ್ದಾರೆ. 
ಬಿಜೆಪಿ ಮುಖಂಡ ರಾಜಾರಾಂ ಭಟ್ ಆಯೋಜಿಸಿದ್ದ ಉಪವಾಸ ಸತ್ಯಾಗ್ರಹ ಪ್ರತಿಭಟನೆಯಲ್ಲಿ ಮಾತನಾಡಿದ್ದ ಕಲ್ಲಡ್ಕ ಪ್ರಭಕರ್ ಭಟ್‌ ಅವರು,  ಉಲ್ಲಾಳ್ ಕ್ಷೇತ್ರದಲ್ಲಿನ ಗೋವುಗಳ ಕಳ್ಳತನವನ್ನು ಖಂಡಿಸಿದ್ದರು. ಆ ಕ್ಷೇತ್ರವನ್ನು ಯು. ಟಿ. ಖಾದರ್ ಪ್ರತಿನಿಧಿಸುತ್ತಿದ್ದು, ಖಾದರ್ ಕೂಡಾ ಗೋವುಗಳ ಕಳ್ಳ ಎಂದು ಆರೋಪಿಸಿದರು. ಅವರು ಗೋವುಗಳ ಭಕ್ಷಕರಾಗಿದ್ದು, ದೇವಸ್ಥಾನಗಳಿಗೆ ಅವಕಾಶ ನೀಡದಂತೆ ಕರೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.