ಹೆಚ್ ಡಿ ರೇವಣ್ಣರನ್ನು ಸೋಲಿಸಲು ಸಿಎಂ ಸಿದ್ದರಾಮಯ್ಯ ತೆರೆಮರೆಯ ಯತ್ನ?
ರಾಜಕೀಯದಲ್ಲಿ ಇಂದು ಇದ್ದ ಪರಿಸ್ಥಿತಿ ನಾಳೆ ಇರುವುದಿಲ್ಲ. ಮಾಜಿ ಸಚಿವ ಮತ್ತು ಜೆಡಿಎಸ್ ನಾಯಕ ...

ಹಾಸನ: ರಾಜಕೀಯದಲ್ಲಿ ಇಂದು ಇದ್ದ ಪರಿಸ್ಥಿತಿ ನಾಳೆ ಇರುವುದಿಲ್ಲ. ಮಾಜಿ ಸಚಿವ ಮತ್ತು ಜೆಡಿಎಸ್ ನಾಯಕ ಹೆಚ್.ಡಿ.ರೇವಣ್ಣ ಅವರ ಮೇಲೆ ನಂಬಿಕೆ ಹೊಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೋಧರ್ಮ ಇಂದು ಬದಲಾಗಿದೆ.
ಜೆಡಿಎಸ್ ನಾಯಕರ ಭದ್ರ ಕೋಟೆಯಾಗಿರುವ ಹಾಸನ ಜಿಲ್ಲೆಯ ಹೊಳೆನರಸೀಪುರ ಕ್ಷೇತ್ರದಲ್ಲಿ ಹೆಚ್.ಡಿ.ರೇವಣ್ಣ ಅವರ ವಿರುದ್ಧ ಕಾಂಗ್ರೆಸ್ ನಿಂದ ಪ್ರಬಲ ಸ್ಪರ್ಧಿಯನ್ನು ಕಣಕ್ಕಿಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ಧತೆ ನಡೆಸುತ್ತಿದ್ದಾರೆ. ಮೈಸೂರಿನ ಚಾಮುಂಡಿ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರ ವಿರುದ್ಧ ಸವಾಲೊಡ್ಡಿ ಜಿ.ಟಿ.ದೇವೇಗೌಡರನ್ನು ಜೆಡಿಎಸ್ ನಿಂದ ಕಣಕ್ಕಿಳಿಸುವ ಹೆಚ್ ಡಿ ಕುಮಾರಸ್ವಾಮಿಯವರ ನಿರ್ಧಾರಕ್ಕೆ ಸಿದ್ದರಾಮಯ್ಯನವರ ಈ ಪ್ರತೀಕಾರವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಾಗೂರು ಮಂಜೇಗೌಡರ ನಡುವೆ ನಡೆದ ಟೆಲಿಫೋನ್ ಸಂಭಾಷಣೆ ವೈರಲ್ ಆಗುತ್ತಿದ್ದಂತೆ ಹೆಚ್ ಡಿ ರೇವಣ್ಣ ಕೂಡ ಆಘಾತಗೊಂಡಿದ್ದಾರೆ ಎನ್ನಲಾಗುತ್ತಿದೆ.
ಮಂಜೇಗೌಡ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಮುಖ್ಯಸ್ಥರಾಗಿದ್ದು ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೊಳೆನರಸೀಪುರದಲ್ಲಿ ರೇವಣ್ಣ ಅವರನ್ನು ಸೋಲಿಸಿ ಗೌಡರ ಕುಟುಂಬವನ್ನು ರಾಜಕೀಯದಲ್ಲಿ ಹೊಳೆನರಸೀಪುರದಿಂದ ಮುಗಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ ಎಂಬ ಟೆಲಿಫೋನ್ ಸಂಭಾಷಣೆ ಇತ್ತೀಚೆಗೆ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಇದಕ್ಕಾಗಿ ಮಂಜೇಗೌಡರಿಗೆ ಸಹಾಯ ಮಾಡಲು ರಾಜ್ಯ ಮುಖ್ಯ ಕಾರ್ಯದರ್ಶಿಗಳ ಅವಧಿಯನ್ನು ವಿಸ್ತರಿಸಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


