ರಾಜಕೀಯ

ಪ್ರತಿಪಕ್ಷಗಳು ಒಂದಾದರೆ ವಾರಣಾಸಿಯಲ್ಲಿ ಮೋದಿ ಸಹ ಸೋಲುತ್ತಾರೆ: ರಾಹುಲ್

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲೋ ವಿಚಾರ ಬಿಟ್ಟಾಕಿ. ಪ್ರತಿಪಕ್ಷಗಳು ಒಂದಾದರೆ ಪ್ರಧಾನಿ ನರೇಂದ್ರ ಮೋದಿ...

ಪ್ರತಿಪಕ್ಷಗಳು ಒಂದಾದರೆ ವಾರಣಾಸಿಯಲ್ಲಿ ಮೋದಿ ಸಹ ಸೋಲುತ್ತಾರೆ: ರಾಹುಲ್
ರಾಹುಲ್ ಗಾಂಧಿ
Published On :
ಬೆಂಗಳೂರು: 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲೋ ವಿಚಾರ ಬಿಟ್ಟಾಕಿ. ಪ್ರತಿಪಕ್ಷಗಳು ಒಂದಾದರೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ವಕ್ಷೇತ್ರ ವಾರಣಾಸಿಯಲ್ಲೇ ಸೋಲು ಅನುಭವಿಸುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭಾನುವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಪ್ರತಿಪಕ್ಷಗಳ ಒಗ್ಗಟ್ಟಾಗುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೆ ವಾರಣಾಸಿಯಲ್ಲಿ ಎಸ್ ಪಿ ಮತ್ತು ಬಿಎಸ್ಪಿ ಒಂದಾದರೆ ಪ್ರಧಾನಿ ಮೋದಿ ಸಹ ತಮ್ಮ ಕ್ಷೇತ್ರ ಕಳೆದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ.
ವಿವಿಧ ವೈಯುಕ್ತಿಕ ಮತ್ತು ಪ್ರಾದೇಶಿಕ ಆಕಾಂಕ್ಷೆಗಳ ನಡುವೆಯೂ ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ಒಗ್ಗಟ್ಟಾಗುವ ಮತ್ತು ಮೈತ್ರಿಯನ್ನು ನಿರ್ವಹಿಸುವ ವಿಶ್ವಾಸ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ಪ್ರಸ್ತುತ ಎನ್ ಡಿಎ ಆಡಳಿತ ಸಂಪೂರ್ಣ ಕುಸಿದಿದೆ ಎಂದರು.
ವರದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ರಾಹುಲ್, ಮುಂದಿನ ಚುನಾವಣೆಯಲ್ಲಿ ಖಂಡಿತ ಬಿಜೆಪಿ ಗೆಲ್ಲುವುದಿಲ್ಲ. ಕೇಂದ್ರದಲ್ಲಿ ಮತ್ತೆ ನಾವೇ ಅಧಿಕಾರಿಕ್ಕೆ ಬರುತ್ತೇವೆ. ಏಕೆಂದರೆ ಈಗ ಪ್ರತಿಪಕ್ಷಗಳು ಒಂದಾಗುತ್ತಿವೆ. ಮೈತ್ರಿಯ ಮಾತುಕತೆ ಒಂದು ಹಂತಿಮ ಹಂತಕ್ಕೆ ತಲುಪಿದೆ ಎಂದರು.
ಬಳಿಕ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಜನಾರ್ಶೀವಾದ ಯಾತ್ರೆಯ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ದ್ವೇಷ, ಅಸೂಯೆ ಬಿತ್ತುವ ಮತ್ತು ಸಮಾಜವನ್ನು ವಿಭಜಿಸುವ ಕೆಲಸವನ್ನು ಜಿಜೆಪಿ ಮಾಡುತ್ತಿದೆ ಆರೋಪಿಸಿದರು.
ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ಪ್ರತಿಪಕ್ಷಗಳ ಮುಖಂಡರನ್ನು ಬೆಕ್ಕು, ನಾಯಿ, ಪ್ರಾಣಿ, ಪಕ್ಷಿಗಳಿಗೆ ನಿಕೃಷ್ಟವಾಗಿ ಹೋಲಿಸಿದ್ದಾರೆ. ಆದರೆ, ಕಾಂಗ್ರೆಸ್ ಎಂದೂ ಇಂಥಹ ಕೆಲಸ ಮಾಡಿಲ್ಲ ಎಂದರು.
ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಬಂದು ಜೈಲಿಗೆ ಹೋಗಿ ಬಂದವರನ್ನು ಪಕ್ಕ ಕೂರಿಸಿಕೊಂಡು ಭ್ರಷ್ಟಾಚಾರದ ಮಾತುಗಳನ್ನು ಆಡುತ್ತಾರೆ. ಸಾವಿರಾರು ಕೋಟಿ ವಂಚನೆ ಮಾಡಿ ವಿದೇಶಕ್ಕೆ ಹೋದವರ ಬಗ್ಗೆ ಮೋದಿ ಮಾತನಾಡುವುದಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.