ವಿಧಾನಸಭಾ ಚುನಾವಣೆ: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ, 72 ಅಭ್ಯರ್ಥಿಗಳ ಘೋಷಣೆ
ದೆಹಲಿಯಲ್ಲಿ ನರೇಂದ್ರ ಮೋದಿ ನೇತೃತ್ವದ ನಡೆದ ಸಭೆಯ ಬಳಿಕ ಭಾರತೀಯ ಜನತಾ ಪಕ್ಷ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ತನ್ನ ಪಕ್ಷದ 72 ಅಭ್ಯ್ರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ

Published On :
ನವದೆಹಲಿ: ದೆಹಲಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಲ್ಲಿನಡೆದ ಸಭೆಯ ಬಳಿಕ ಭಾರತೀಯ ಜನತಾ ಪಕ್ಷ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ತನ್ನ ಪಕ್ಷದ 72 ಅಭ್ಯ್ರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಸಂಜೆ 6.30ಕ್ಕೆ ಆರಂಭವಾದ ಸಭೆ ಸುಮಾರು ನಾಲ್ಕು ಗಂಟೆಗಳ ಕಾಲ ನಡೆದಿದ್ದು ಅಂತಿಮವಾಗಿ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಸಿದ್ದವಾಗಿದೆ.
ಸುಮಾರು 110 ಹೆಸರುಗಳ ಪಟ್ಟಿಯೊಡನೆ ರಾಜ್ಯ ನಾಯಕರು ದೆಹಲಿಗೆ ತೆರಳಿದ್ದರೂ ಅಮಿತ್ ಶಾ ಮತ್ತು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮಲಾಲ್ ಅವರ ಬಳಿ ಇದ್ದ ಸಂಘದ ಪ್ರಮುಖರು ಸಿದ್ಧಪಡಿಸಿದ ಪಟ್ಟಿಗಳ ನಡುವೆ ತಾಳೆ ಹಾಕಿ ಸಹಮತವಿದ್ದ ಹೆಸರುಗಳಿಗೆ ಮಾತ್ರ ಸಮಿತಿಯ ಹಸಿರು ನಿಶಾನೆ ತೋರಿದೆ.
ಪಟ್ಟಿಯಲ್ಲಿರುವ ಮಾಹಿತಿ ಅನುಸಾರ ಬಿಜೆಪಿ ರಾಜ್ಯಾಧ್ಯಕ್ಷ ಸಿಎಂ ಅಭ್ಯರ್ಥಿ ಬಿ.ಎಸ್ ಯಡಿಯೂರಪ್ಪ ಶಿಕಾರಿಪುರದಿಂದ ಕಣಕ್ಕಿಳಿಯಲಿದ್ದಾರೆ. ಅಫ್ಜಲ್ ಪುರ ವಿಧಾನಸಭೆಯಿಂದ ಮಾಲಿಕಯ್ಯ ಗುತ್ತೇದಾರ್, ಬಸವಕಲ್ಯಾಣದಿಂದ- ಮಲ್ಲಿಕಾರ್ಜುನ ಖೂಬಾ ಸ್ಪರ್ದಿಸಲಿದ್ದಾರೆ.
72 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಹೀಗಿದೆ:
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿAmit Shahಅಮಿತ್ ಷಾKarnataka Assembly ElectionB. S. Yeddyurappaಕರ್ನಾಟಕ ವಿಧಾನಸಭೆ ಚುನಾವಣೆಬಿ. ಎಸ್. ಯಡಿಯೂರಪ್ಪ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


