ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ: ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಎಫ್ ಐ ಆರ್
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಸಚಿವ ಪ್ರಮೋದ್ ಮಧ್ವರಾಜ್ ಅವರ ವಿರುದ್ಧ ಶನಿವಾರ ಎಫ್ಐಆರ್ ದಾಖಲಾಗಿದೆ...

Published On :
ಉಡುಪಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಸಚಿವ ಪ್ರಮೋದ್ ಮಧ್ವರಾಜ್ ಅವರ ವಿರುದ್ಧ ಶನಿವಾರ ಎಫ್ಐಆರ್ ದಾಖಲಾಗಿದೆ.
ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ನಲ್ಲಿ ನಡೆಯುತ್ತಿರುವ ಪುರುಷರ ವೇಟ್ಲಿಫ್ಟಿಂಗ್ನ 56 ಕೆ.ಜಿ ವಿಭಾಗದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಬೆಳ್ಳಿ ಪದಕ ಗೆದ್ದಿರುವ ಕುಂದಾಪುರ ಸಮೀಪದ ಗುರುರಾಜ್ ಪೂಜಾರಿ ಅವರಿಗೆ, ಕ್ರೀಡಾ ನೀತಿಯ ಅನ್ವಯ 25 ಲಕ್ಷ ನಗದು ಹಾಗೂ ಸರ್ಕಾರಿ ‘ಬಿ‘ ಗ್ರೂಪ್ ಹುದ್ದೆ ಸಿಗಲಿದೆ ಎಂದು ಅವರು ಹೇಳಿಕೆ ನೀಡಿದ್ದರು.
ಚುನಾವಣೆ ಸಂದರ್ಭದಲ್ಲಿ ಇಂತಹ ಹೇಳಿಕೆಯಿಂದ ಮತದಾರರನ್ನು ಓಲೈಸಿದಂತಾಗುತ್ತದೆ, ಆಮಿಷ ಒಡ್ಡಿದಂತಾಗುತ್ತದೆ ಎಂದು ಆರೋಪಿಸಿ ಚುನಾವಣಾಧಿಕಾರಿಗಳು ಉಡುಪಿ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಿದ್ದಾರೆ.
ಕ್ರೀಡಾ ನೀತಿಯ ಬಗ್ಗೆ ಗೆಜೆಟ್ ನೋಟಿಫಿಕೇಶನ್ ಆಗಿಲ್ಲ. ಹೀಗಾಗಿ ಮತದಾನ ಸಂದರ್ಭದಲ್ಲಿ ಇಂತಹ ಹೇಳಿಕೆಗಳು ಮತದಾರರನ್ನು ಓಲೈಸುವಂತಾಗುತ್ತದೆ ಅಲ್ಲದೇ ಆಮಿಷ ಒಡ್ಡುವಂತಾಗುತ್ತದೆ, ಇದು ನೀತಿ ಸಂಹಿತೆಗೆ ವಿರೋಧವಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಎಫ್ ಐಆರ್ಚುನಾವಣಾ ನೀತಿ ಸಂಹಿತೆPramod Madhwarajಪ್ರಮೋದ್ ಮಧ್ವರಾಜ್Karnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆmodel code of conduct. FIR
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


