'ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಹಂಕಾರಕ್ಕೆ ತಕ್ಕ ಬೆಲೆ ತೆರುತ್ತಾರೆ'
ಸೊಕ್ಕಿನ ವರ್ತನೆ, ಸ್ವಜನ ಪಕ್ಷಪಾತ ಹಾಗೂ ಅಹಂಕಾರಕ್ಕೆ ಸಿಎಂ ಸಿದ್ದರಾಮಯ್ಯ ಸೂಕ್ತ ಬೆಲೆ ತೆರೆಲಿದ್ದಾರೆ...

Published On :
ಹಾಸನ: ಸೊಕ್ಕಿನ ವರ್ತನೆ, ಸ್ವಜನ ಪಕ್ಷಪಾತ ಹಾಗೂ ಅಹಂಕಾರಕ್ಕೆ ಸಿಎಂ ಸಿದ್ದರಾಮಯ್ಯ ಸೂಕ್ತ ಬೆಲೆ ತೆರೆಲಿದ್ದಾರೆ, ಜನ ಅವರಿಗೆ ಪಾಠ ಕಲಿಸಲು ಸಮಯಕ್ಕಾಗಿ ಕಾಯುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ಹಾಸನ ಜಿಲ್ಲೆಯ ಬೇಲೂರಿನಲ್ಲಿ ಜೆಡಿಎಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ದೇವೇಗೌಡರು, ಸಾರ್ವಜನಿಕ ಸಭೆಗಳಲ್ಲಿ ಜೆಡಿಎಸ್ ನಾಯಕರನ್ನು ನಿಂದಿಸಲು ಅವರಿಗೆ ಯಾವ ನೈತಿಕ ಹಕ್ಕು ಇಲ್ಲ, ದೇಶದಲ್ಲಿ ತಾವೊಬ್ಬರೇ ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿ ಎತ್ತಿಹಿಡಿಯುತ್ತಿರುವುದಾಗಿ ಸಿದ್ದರಾಮಯ್ಯ ಭ್ರಮಿಸುತ್ತಿದ್ದಾರೆ ಎಂದು ಟೀಕಿಸಿದರು.ಚ
2019ರ ರಾಜ್ಯ ವಿಧಾನಸಭೆ ಚುನಾವಣೆ ಹಲವು ಕಾಂಗ್ರೆಸ್ ನಾಯಕರ ಪಾಲಿಗೆ ಕೊನೆಯ ಚುನಾವಣೆಯಾಗಿದೆ ಎಂದು ಹೇಳಿದರು. ಕಳೆದ ಐದು ವರ್ಷಗಳಲ್ಲಿ ಧರ್ಮ ಹಾಗೂ ಜಾತಿಗಳನ್ನು ಒಡೆದಿರುವುದೇ ಸಿಎಂ ಸಿದ್ದರಾಮಯ್ಯ ಅವರ ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ ಎಂದು ಆರೋಪಿಸಿದರು ರಾಜ್ಯದಲ್ಲಿ ಕಾಂಗ್ರೆಸ್ ಸೋಲಿಸಲು ಜಡಿಎಸ್ ಬಿಎಸ್ ಪಿ ಜೊತೆ ಕೈ ಜೋಡಿಸಲಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯH D Deve GowdaಹಾಸನHassanಎಚ್Karnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆಡಿ ದೇವೇಗೌಡ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


