ಪರಿಶಿಷ್ಟ ಕ್ಷೇತ್ರ ಗೆಲ್ಲಲು ಬಿಜೆಪಿ ರಣತಂತ್ರ: ಮೊಳಕಾಲ್ಮೂರು ಕ್ಷೇತ್ರದಿಂದ ಶ್ರೀರಾಮುಲು ಕಣಕ್ಕೆ
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ರಾಜಕೀಯ ಸಮೀಕರಣಗಳು ಬದಲಾಗಿವೆ, ನಾಯಕ ಸಮುದಾಯದ ಪ್ರಬಲ ಮುಖಂಡ ಬಳ್ಳಾರಿ ಸಂಸದ ಶ್ರೀರಾಮುಲು ...

Published On :
ಚಿತ್ರದುರ್ಗ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ರಾಜಕೀಯ ಸಮೀಕರಣಗಳು ಬದಲಾಗಿವೆ, ನಾಯಕ ಸಮುದಾಯದ ಪ್ರಬಲ ಮುಖಂಡ ಬಳ್ಳಾರಿ ಸಂಸದ ಶ್ರೀರಾಮುಲು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ಕ್ಷೇತ್ರದಲ್ಲಿ ವಾಲ್ಮೀಕಿ ನಾಯಕ ಸಮುದಾಯದ ಬಿ.ಶ್ರೀರಾಮುಲು ಅವರಿಗೆ ಟಿಕೆಟ್ ನೀಡುವ ಮೂಲಕ, ರಾಜ್ಯದಲ್ಲಿ ಪರಿಶಿಷ್ಟ ಪಂಗಡಕ್ಕೆ (ಎಸ್.ಟಿ) ಮೀಸಲಾಗಿರುವ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲು ಬಿಜೆಪಿ ರಣತಂತ್ರ ರೂಪಿಸಿದೆ.
ಮೊಳಕಾಲ್ಮೂರು ಕ್ಷೇತ್ರದಿಂದ ಶ್ರೀರಾಮುಲು ಸ್ಪರ್ಧಿಸುವುದರಿಂದ ಬಿಜೆಪಿಯ ಮಿಷನ್-150 ಗೆ ಸಹಾಯವಾಗುವುದು ಎಂಬ ಲೆಕ್ಕಾಚಾರ ಇದಾಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ, ಚಿತ್ರದುರ್ಗ, ಹೂಳಲ್ಕೆರೆಯಲ್ಲಿ ನಾಯಕ ಜನಾಂಗದವರಿದ್ದಾರೆ.ಜೊತೆಗೆ ನೆರೆಯ ಬಳ್ಳಾರಿ, ರಾಯಚೂರು, ಕೊಪ್ಪಳ ಮತ್ತು ದಾವಣಗೆರೆ ಕ್ಷೇತ್ರಗಳಲ್ಲೂ ನಾಯಕ ಜನಾಂಗದ ಮತಗಳಿವೆ.
ಶ್ರೀರಾಮುಲು ನಾಯಕ ಜನಾಂಗದ ಪ್ರಭಾವಶಾಲಿ ಮುಖಂಡ. ಶ್ರೀರಾಮುಲು ಸ್ಪರ್ದೆಯಿಂದ ಕೇವಲ ಚಿತ್ರದುರ್ಗದಲ್ಲಿ ಮಾತ್ರವಲ್ಲದೇ ರಾಜ್ಯದಲ್ಲಿ ಬಿಜೆಪಿ ಮತ್ತಷ್ಟು ಬಲಗೊಳ್ಳಲಿದೆ. ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು ಮತ್ತು ಶಿವಮೊಗ್ಗ ಮತ್ತು ಹಳೇ ಮೈಸೂರು ಭಾಗದಲ್ಲಿ ಪರಿಶಿಷ್ಟ ಮತಗಳನ್ನು ಪಡೆಯಲು ಸಹಾಯವಾಗುವುದು ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಕೆ.ಟಿ ನವೀನ್ ತಿಳಿಸಿದ್ದಾರೆ.
2013ರ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮುಲು ನೇತೃತ್ವದ ಬಿಎಸ್‌ಆರ್ ಪಕ್ಷದಿಂದ ಮೊಳಕಾಲ್ಮುರಿನಲ್ಲಿ ಸ್ಪರ್ಧಿಸಿದ್ದ ಎಸ್.ತಿಪ್ಪೇಸ್ವಾಮಿ ಜಯ ಗಳಿಸಿದ್ದರು. ತಿಪ್ಪೇಸ್ವಾಮಿಗೆ ಟಿಕೆಟ್ ಸಿಗದಿದ್ದಕ್ಕೆ ನಿರಾಸೆಯಾಗಿದ್ದು, ಇಂದು ಸಂಜೆ ಬೆಂಗಳೂರಿಗೆ ಆಗಮಿಸುತ್ತಿರುವ ತಿಪ್ಪೇಸ್ವಾಮಿ ಬಿಜೆಪಿಯ ಹಿರಿಯ ನಾಯಕರನ್ನು ಭೇಟಿ ಮಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿSriramuluಶ್ರೀರಾಮುಲುMolakalmuruಮೊಳಕಾಲ್ಮೂರುKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


