ಟಿಕೆಟ್ ಗಾಗಿ ಕಸರತ್ತು: ದಿಲ್ಲಿಯಲ್ಲಿ ಬೀಡು ಬಿಟ್ಟ ಕಾಂಗ್ರೆಸ್ ಮುಖಂಡರು, ಆಕಾಂಕ್ಷಿಗಳು
ದೆಹಲಿಯ ಕರ್ನಾಟಕ ಭವನ ಮತ್ತು ಕರೋಲ್ ಬಾಗ್ ದಲ್ಲಿರುವ ಹೋಟೆಲ್ ಗಳಲ್ಲಿ ಕಾಂಗ್ರೆಸ್ ಮುಖಂಡರೇ...

Published On :
ನವದೆಹಲಿ: ದೆಹಲಿಯ ಕರ್ನಾಟಕ ಭವನ ಮತ್ತು ಕರೋಲ್ ಬಾಗ್ ದಲ್ಲಿರುವ ಹೋಟೆಲ್ ಗಳಲ್ಲಿ ಕಾಂಗ್ರೆಸ್ ಮುಖಂಡರೇ ತುಂಬಿಕೊಂಡಿದ್ದು, ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಗಾಗಿ ಪರೇಡ್ ನಡೆಸುತ್ತಿದ್ದಾರೆ.
ಹಲವು ಮುಖಂಡರು ದೆಹಲಿಯಲ್ಲೇ ಉಳಿದುಕೊಂಡು ಟಿಕೆಟ್ ಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ ಅವರ ಮೇಲೆ ಒತ್ತಡ ಹೇರುತ್ತಿದ್ದಾರೆ.
ರಾಜ್ಯದ ಬಹುತೇಕ ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಮತ್ತು ಟಿಕೆಟ್ ಆಕಾಂಕ್ಷಿಗಳು ದೆಹಲಿಗೆ ಆಗಮಿಸಿದ್ದು, ಟಿಕೆಟ್ ಗಾಗಿ ಸಂಸದರು, ಸಚಿವರು ಮತ್ತು ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸಿದ ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದ್ದಾರೆ.
ಕರೋಲ್ ಬಾಗ್ ಮತ್ತು ಕರ್ನಾಟಕ ಭವನದಲ್ಲಿ ಯಾವುದೇ ರೂಮ್ ಗಳು ಸಿಗುತ್ತಿಲ್ಲ. ಇಲ್ಲಿ ನೂರಾರು ಕನ್ನಡಗರಿದ್ದು, ಮಿನಿ ಬೆಂಗಳೂರು ನಿರ್ಮಾಣವಾಗಿದೆ ಎಂದು ಕೋಲಾರ್ ಟಿಕೆಟ್ ಆಕಾಂಕ್ಷಿಯೊಬ್ಬರು ಹೇಳಿದ್ದಾರೆ.
ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಹ ಭಾರಿ ಕಸರತ್ತು ನಡೆಸುತ್ತಿದ್ದು, ಕೇಂದ್ರ ಚುನಾವಣಾ ಪರಿಶೀಲನಾ ಸಮಿತಿ ಮುಖಂಡರೊಂದಿಗೆ ಸರಣಿ ಸಭೆ ನಡೆಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ದೆಹಲಿDelhiCongress leadersಕಾಂಗ್ರೆಸ್ ನಾಯಕರುticket aspirantsಟಿಕೆಟ್ ಆಕಾಂಕ್ಷಿಗಳುKarnataka Assembly Election
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


