ರಾಜಕೀಯ

ರಾಜ್ಯದಲ್ಲಿ ಅತಂತ್ರ ವಿಧಾನಸಭೆ; ಕಾಂಗ್ರೆಸ್ ಏಕೈಕ ಅತಿ ದೊಡ್ಡ ಪಕ್ಷ: ಮತದಾನ ಪೂರ್ವ ಸಮೀಕ್ಷೆ

ರಾಷ್ಟ್ರ ರಾಜಕಾರಣದಲ್ಲೂ ತೀವ್ರ ಕುತೂಹಲ ಮೂಡಿಸಿರುವ ಮುಂದಿನ ತಿಂಗಳು ನಡೆಯುವ ವಿಧಾನಸಭಾ....

ರಾಜ್ಯದಲ್ಲಿ ಅತಂತ್ರ ವಿಧಾನಸಭೆ; ಕಾಂಗ್ರೆಸ್ ಏಕೈಕ ಅತಿ ದೊಡ್ಡ ಪಕ್ಷ: ಮತದಾನ ಪೂರ್ವ ಸಮೀಕ್ಷೆ
ವಿಧಾನಸೌಧ
Published On :
ನವದೆಹಲಿ: ರಾಷ್ಟ್ರ ರಾಜಕಾರಣದಲ್ಲೂ ತೀವ್ರ ಕುತೂಹಲ ಮೂಡಿಸಿರುವ ಮುಂದಿನ ತಿಂಗಳು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗದೆ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ ಎಂದು ಇಂಡಿಯಾ ಟುಡೇ ಮತ್ತು ಕಾರ್ವಿ ಇನ್ ಸೈಟ್ಸ್‌ ಜಂಟಿಯಾಗಿ ನಡೆಸಿದ ಮತದಾನ ಪೂರ್ವ ಸಮೀಕ್ಷೆ ಹೇಳಿದೆ.
ಆಡಳಿತಾರೂಢ ಕಾಂಗ್ರೆಸ್ ಸಾಕಷ್ಟು ಸಂಖ್ಯೆಯಲ್ಲಿ ಸ್ಥಾನ ಕಳೆದುಕೊಳ್ಳಲಿದ್ದು, 224 ಕ್ಷೇತ್ರಗಳ ಪೈಕಿ 90 ರಿಂದ 101 ಸ್ಥಾನಗಳನ್ನು ಪಡೆಯುವ ಮೂಲಕ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ. 
ಪ್ರಮುಖ ಪ್ರತಿಪಕ್ಷ ಬಿಜೆಪಿ 78ರಿಂದ 86 ಸ್ಥಾನಗಳನ್ನು ಪಡೆಯಲಿದ್ದು, ಜೆಡಿಎಸ್ 34ರಿಂದ 43 ಸ್ಥಾನಗಳನ್ನು ಪಡೆಯುವ ಮೂಲಕ ಕಿಂಗ್ ಮೇಕರ್ ಆಗಲಿದೆ ಎಂದು ಸಮೀಕ್ಷೆ ಮತದಾನ ಪೂರ್ವ ಸಮೀಕ್ಷೆ ತಿಳಿಸಿದೆ.
224 ಸದಸ್ಯ ಬಲದ ಕರ್ನಾಟಕ ವಿಧಾನ ಸಭೆಯಲ್ಲಿ ಅಧಿಕಾರದ ಗದ್ದುಗೆ ಏರಲು ಸರಳ ಬಹುಮತಕ್ಕಾಗಿ ಯಾವುದೇ ಒಂದು ಪಕ್ಷ 112 ಸ್ಥಾನಗಳನ್ನು ಗೆಲ್ಲಬೇಕಿದೆ.
ಮತ ಹಂಚಿಕೆ ಪ್ರಕಾರ ಹೇಳುವುದಾದರೆ ಕಾಂಗ್ರೆಸ್‌ ಶೇ.37ರಷ್ಟು ಮತಗಳನ್ನು ಗಳಿಸಲಿದೆ. ಬಿಜೆಪಿಗೆ ಶೇ.35 ರಷ್ಟು ಮತಗಳು ದಕ್ಕಲಿವೆ. ಜೆಡಿಎಸ್‌-ಬಿಎಸ್‌ಪಿ ಗೆ ಒಟ್ಟಾರೆಯಾಗಿ ಶೇ.19ರಷ್ಟು ಮತಗಳು ಪ್ರಾಪ್ತವಾಗಲಿವೆ. 
ಅತಂತ್ರ ಸ್ಥಿತಿ ನಿರ್ಮಾಣವಾದರೆ ಅತ್ಯಂತ ಹಳೆಯ ಕಾಂಗ್ರೆಸ್‌ ಪಕ್ಷಕ್ಕೆ ಜೆಡಿಎಸ್‌ ಬೆಂಬಲ ಕೊಡಬೇಕು ಎಂದು ಶೇ.39 ರಷ್ಟು ಜನ ಬಯಸಿದ್ದು, ಬಿಜೆಪಿಗೆ ಜೆಡಿಎಸ್‌ ಬೆಂಬಲ ಕೊಡಬೇಕು ಎಂದು ಶೇ.29ರಷ್ಟು ಮಂದಿ ಬಯಸುತ್ತಾರೆ ಎನ್ನುವುದು ಸಮೀಕ್ಷೆಯಿಂದ ತಿಳಿದು ಬಂದಿದೆ.
ಇಂಡಿಯಾ ಟುಡೆ ಮತ್ತು ಕಾರ್ವಿ ಇನ್‌ಸೈಟ್ಸ್‌  ಈ ಮತದಾನ ಪೂರ್ವ ಸಮೀಕ್ಷೆಗಾಗಿ ರಾಜ್ಯಾದ್ಯಂತದ 224 ವಿಧಾನಸಭಾ ಕ್ಷೇತ್ರಗಳ 27,919 ಮಂದಿಯನ್ನು ಸಂದರ್ಶಿಸಿದೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಮೇ 12ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 15ರಂದು ಫ‌ಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.