ಚಾಮುಂಡೇಶ್ವರಿಯಿಂದ ಮಾತ್ರ ಸಿಎಂ ಸಿದ್ದರಾಮಯ್ಯ ಸ್ಪರ್ಧೆ!
ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಭಾನುವಾರ ಬಿಡುಗಡೆ ಮಾಡಿದ್ದು, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರವೊಂದರಲ್ಲಿ ಮಾತ್ರ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಮಾಡಲಿದ್ದಾರೆ.

Published On :
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಭಾನುವಾರ ಬಿಡುಗಡೆ ಮಾಡಿದ್ದು, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರವೊಂದರಲ್ಲಿ ಮಾತ್ರ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಮಾಡಲಿದ್ದಾರೆ.
ಈ ಹಿಂದೆ ಸೋಲಿನ ಶಂಕೆ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ರಾಜ್ಯ ಗುಪ್ತಚರ ಇಲಾಖೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಸೋಲುವ ಸಾಧ್ಯತೆ ಇದೆ ಎಂದು ಹೇಳಿದೆ ಎಂದು ಕೆಲ ವರದಿಗಳು ಪ್ರಸಾರವಾಗಿತ್ತು. ಹೀಗಾಗಿ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಅಲ್ಲದೇ ಎರಡನೇ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಇದಕ್ಕೆ ಇಂಬು ನೀಡುವಂತೆ ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಖಚಿತ ಎಂದೂ ಹೇಳಲಾಗಿತ್ತು.
ಆದರೆ ಇಂದು ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಒಂದೇ ಕ್ಷೇತ್ರದಿಂದ ಅದರಲ್ಲೂ ಚಾಮುಂಡೇಶ್ವರಿ ಕ್ಷೇತ್ರದಿಂದ ಮಾತ್ರ ಸ್ಪರ್ಧೆ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ 2ನೇ ಕ್ಷೇತ್ರ ಎಂದು ಹೇಳಲಾಗುತ್ತಿದ್ದ ಬಾದಾಮಿ ಕ್ಷೇತ್ರದಿಂದ ಡಾ. ದೇವರಾಜ್ ಪಾಟೀಲ್ ಅವರಿಗೆ ಟಿಕೆಟ್ ನೀಡಲಾಗಿದೆ.
ಇನ್ನು ಹಾಲಿ ಪಟ್ಟಿಯಲ್ಲಿ ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆಯಾದರೂ, 16 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುCongressಕಾಂಗ್ರೆಸ್BengaluruPoliticsಅಭ್ಯರ್ಥಿಗಳ ಪಟ್ಟಿcandidates listKarnataka Assembly Electionಕರ್ನಾಟಕ ವಿಥಾನಸಭೆ ಚುನಾವಣೆ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


