ಯೋಗಿ ವಿರುದ್ಧ ಹೇಳಿಕೆ: ದಿನೇಶ್ ಗುಂಡುರಾವ್ ವಿರುದ್ಧ ಎಫ್ಐಆರ್ ದಾಖಲು
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಿವಾದಾತ್ಮಕ ಹೇಳಿಕೆ ನಿಡಿದ್ದ ಕೆಪಿಸಿಸಿ...

Published On :
ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಿವಾದಾತ್ಮಕ ಹೇಳಿಕೆ ನಿಡಿದ್ದ ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಅವರ ವಿರುದ್ಧ ಮಂಗಳವಾರ ಎಫ್ಐಆರ್ ದಾಖಲಿಸಲಾಗಿದೆ.
ಯೋಗಿ ಆದಿತ್ಯನಾಥ ಅವರು ಕರ್ನಾಟಕಕ್ಕೆ ಬಂದರೆ ಚಪ್ಪಲಿಯಿಂದ ಹೊಡಿಯಿರಿ ಎಂದು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದ ದಿನೇಶ್ ಗುಂಡೂರಾವ್ ಅವರ ವಿರುದ್ಧ ಬಿ.ರಾಮಾಚಾರಿ ಎಂಬುವವರು ನೀಡಿದ್ದ ದೂರಿನ ಆಧಾರದ ಮೇಲೆ ಹೈಗ್ರೌಡ್ಸ್ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
'ಯೋಗಿ ಒಬ್ಬ ಡೊಂಗಿ ರಾಜಕಾರಣಿ. ಅವರೇನಾದರೂ ಮತ್ತೆ ಕರ್ನಾಟಕಕ್ಕೆ ಬಂದಲ್ಲಿ ಚಪ್ಪಲಿಯಲ್ಲಿ ಹೊಡೆಯಿರಿ' ಎಂದು ದಿನೇಶ್ ಗುಂಡುರಾವ್ ಅವರು ಹೇಳಿದ್ದರು.
ಬಳಿಕ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದ ಗಂಡುರಾವ್, ನಾನು ಉದ್ದೇಶಪೂರ್ವಕವಾಗಿ ಹೇಳಿಲ್ಲ. ಕಥುವಾ ಮತ್ತು ಉನ್ನಾವ್ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ನಡೆದ ಪ್ರತಿಭಟನೆ ವೇಳೆ ಭಾವೋದ್ವೇಗದಿಂದ ಹೇಳಿದ್ದೇನೆ. ಅದರ ಬಗ್ಗೆ ನನಗೆ ವಿಷಾದವಿದೆ. ಆದರೆ, ವಿಷಯ ಗಂಭೀರ, ಅದರ ಬಗ್ಗೆ ಕ್ರಮವಾಗಬೇಕು. ನನ್ನ ಮಾತಿನ ಹಿನ್ನೆಲೆಯನ್ನು ಅರ್ಥಮಾಡಿಕೊಳ್ಳಬೇಕು. ಒಬ್ಬ ಮಹಿಳೆಗೆ ನ್ಯಾಯಕೊಡಿಸಬೇಕು ಎಂದಬುದೇ ನಮ್ಮ ಉದ್ದೇಶವಾಗಿತ್ತು ಬೇರೇನೂ ಅಲ್ಲ ಎಂದು ಟ್ವೀಟ್ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruDinesh Gundu Raoದಿನೇಶ್ ಗುಂಡುರಾವ್FIRYogi Adityanathಯೋಗಿ ಆದಿತ್ಯನಾಥ್Karnataka Assembly Electionಎಫ್ಆಆರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


