ರಾಜಕೀಯ

ಕಾರ್ಪೊರೇಟ್ ಗಳಿಗೆ ನೀಡುವ ನೆರವು ರೈತರಿಗೇಕೆ ಇಲ್ಲ: ಮೋದಿ ಸರ್ಕಾರಕ್ಕೆ ಸಿದ್ದರಾಮಯ್ಯ ಪ್ರಶ್ನೆ

ರೈತರ ಸಾಲ ಮನ್ನಾ ವಿಷಯದಲ್ಲಿ ಮತ್ತೊಮ್ಮೆ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರನ್ನು ಟಾರ್ಗೆಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ರೈತರಿಗೆ ನೆರವು ನೀಡದೇ ಕಾರ್ಪೊರೇಟ್ ಗಳಿಗೆ ಏಕೆ

ಕಾರ್ಪೊರೇಟ್ ಗಳಿಗೆ ನೀಡುವ ನೆರವು ರೈತರಿಗೇಕೆ ಇಲ್ಲ: ಮೋದಿ ಸರ್ಕಾರಕ್ಕೆ ಸಿದ್ದರಾಮಯ್ಯ ಪ್ರಶ್ನೆ
ಸಿದ್ದರಾಮಯ್ಯ
Published On :
ಬೆಂಗಳೂರು: ರೈತರ ಸಾಲ ಮನ್ನಾ ವಿಷಯದಲ್ಲಿ ಮತ್ತೊಮ್ಮೆ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರನ್ನು ಟಾರ್ಗೆಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ರೈತರಿಗೆ ನೆರವು ನೀಡದೇ ಕಾರ್ಪೊರೇಟ್ ಗಳಿಗೆ ಏಕೆ ನೆರವು ನೀಡುತ್ತಿದ್ದೀರಾ? ಎಂದು ಪ್ರಶ್ನಿಸಿದ್ದಾರೆ. 
ಟ್ವೀಟ್ ಮಾಡಿರುವ ಸಿಎಂ, ರೈತರ ಸಾಲ ಮನ್ನಾಗೆ ಸಂಬಂಧಿಸಿದಂತೆ ಕೇಂದ್ರ ಸಚಿವರು ನಮ್ಮ ವಿರುದ್ಧ ಟೀಕೆ ಮಾಡುತ್ತಾರೆ. ಆದರೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಇದೇ ವಿಷಯಕ್ಕೆ ಸಂಬಂಧಿಸಿದಂತೆ ನಮ್ಮ ಬಳಿ ನೋಟು ಮುದ್ರಿಸುವ ಯಂತ್ರ ಇಲ್ಲ ಎಂದಿದ್ದರು. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತರ ಸಾಲ ಮನ್ನಾ ಮಾಡುವ ಬದಲು ಕಾರ್ಪೊರೇಟ್ ಗಳಿಗೆ ಏಕೆ ಸಹಾಯ ಮಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ. 
ಇದೇ ವೇಳೆ ವಿಜಯೇಂದ್ರ ಸ್ಪರ್ಧೆ ಬಗ್ಗೆಯೂ ಪ್ರತಿಕ್ರಿಯೆ ನೀಡಿರುವ ಅವರು, ನನ್ನ ಅಥವಾ ನನ್ನ ವಿರುದ್ಧ ಯಡಿಯೂರಪ್ಪ ಅಥವಾ ಅವರ ಮಗ ಸ್ಪರ್ಧಿಸಲು ವರುಣಾ ಕ್ಷೇತ್ರಕ್ಕೆ ನನ್ನ ಕೊಡುಗೆ ಬಗ್ಗೆ ಕ್ಷೇತ್ರದ ಜನತೆಗೆ ತಿಳಿದಿದೆ ಎಂದಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.