ರಾಜಕೀಯ

ಎದುರಾಳಿ ಠೇವಣಿ ಕಳೆಯಿರಿ: ಶಿಕಾರಿಪುರದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಬಿಎಸ್ ವೈ ಗುಡುಗು

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್‌.ಯಡಿಯೂರಪ್ಪ ಅವರು ಗುರುವಾರ...

ಎದುರಾಳಿ ಠೇವಣಿ ಕಳೆಯಿರಿ: ಶಿಕಾರಿಪುರದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಬಿಎಸ್ ವೈ ಗುಡುಗು
ನಾಮಪತ್ರ ಸಲ್ಲಿಸುತ್ತಿರುವ ಬಿಎಸ್ ವೈ
Published On :
ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್‌.ಯಡಿಯೂರಪ್ಪ ಅವರು ಗುರುವಾರ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು. 
ಯಡಿಯೂರಪ್ಪ ಅವರು ಇಂದು ಮಧ್ಯಾಹ್ನ 12.45ಕ್ಕೆ ಶಿಕಾರಿಪುರದ ಮಿನಿ ವಿಧಾನೌಸಧದಲ್ಲಿ ಚುನಾವಣಾ ಅಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಅವರಿಗೆ ಛತ್ತೀಸ್‌‌‌ಗಢ ಮುಖ್ಯಮಂತ್ರಿ ರಮಣ್ ಸಿಂಗ್, ಕೇಂದ್ರ ಸಚಿವ ಅನಂತ್ ಕುಮಾರ್, ಪುತ್ರ ಬಿ.ವೈ.ರಾಘವೇಂದ್ರ ಹಾಗೂ ಬಿಜೆಪಿ ನಾಯಕರಾದ ಬಿ.ಶ್ರೀರಾಮುಲು, ಜಿ.ಎಂ.ಸಿದ್ದೇಶ್ವರ್ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದರು.
ನಾಮಪತ್ರ ಸಲ್ಲಿಸಿದ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಯಡಿಯೂರಪ್ಪ, ಶಿಕಾರಿಪುರದಲ್ಲಿ ನನ್ನ ಎದುರಾಳಿಯ ಠೇವಣಿ ಕಳೆಯಬೇಕು ಎಂದು ಗುಡುಗಿದರು.
ಮುಂದಿನ 24 ದಿನಗಳಲ್ಲಿ ನಾನೇ ಈ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆ. 150 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಇಂದಿನಿಂದ ರಾಜ್ಯದ ವಿವಿಧೆಡೆ ಎಡೆಬಿಡದೆ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿದ್ದೇನೆ ಎಂದರು.
ನಾಮಪತ್ರ ಸಲ್ಲಿಸುವ ಮುನ್ನ ಶಿಕಾರಿಪುರದ ಅಧಿದೇವತೆ ಹುಚ್ಚುರಾಯ ಸ್ವಾಮಿ‌ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಅಲ್ಲಿಂದ ರೋಡ್ ಶೋ ಮೂಲಕ ಬಿಎಸ್‌‌ವೈ ಮಿನಿ ವಿಧಾನಸೌಧಕ್ಕೆ ಆಗಮಿಸಿದರು. 
ಏಪ್ರಿಲ್‌ 17ರಿಂದಲೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾದರೂ ಜಿಲ್ಲೆಯಲ್ಲಿ ಮೊದಲ ದಿನ ಯಾರೂ ನಾಮಪತ್ರ ಸಲ್ಲಿಸಿರಲಿಲ್ಲ. 2ನೇ ದಿನ ಬಸವಜಯಂತಿ ಪ್ರಯುಕ್ತ ಸರ್ಕಾರಿ ರಜಾದಿನವಾಗಿತ್ತು. ಹೀಗಾಗಿ 3ನೇ ದಿನವಾದ ಇಂದು ನಾಮಪತ್ರ ಸಲ್ಲಿಕೆ ಕಾರ್ಯ ಚಾಲನೆ ಪಡೆದುಕೊಳ್ಳುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.