ರಾಜ್ಯ ವಿಧಾನಸಭೆ ಚುನಾವಣೆ: ಮತದಾನದ ಅವಧಿ 1 ಗಂಟೆ ಹೆಚ್ಚಳ
ಚುನಾವಣಾ ಆಯೋಗ ಮೇ 12ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನದ ಅವಧಿಯನ್ನ....

Published On :
ಬೆಂಗಳೂರು: ಚುನಾವಣಾ ಆಯೋಗ ಮೇ 12ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನದ ಅವಧಿಯನ್ನು ಒಂದು ಗಂಟೆ ಹೆಚ್ಚಿಸಿದೆ.
ಈ ಸಂಬಂಧ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು, ಮತದಾನದ ಅವಧಿಯನ್ನು ಒಂದು ಗಂಟೆ ಹೆಚ್ಚಿಸಲಾಗಿದ್ದು, ಬೆಳಗ್ಗೆ 7 ಕ್ಕೆ ಆರಂಭವಾಗಿ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ ಎಂದರು.
ಮೇ ತಿಂಗಳಲ್ಲಿ ಬೇಸಿಗೆಯ ಧಗೆ ಮತ್ತಷ್ಟು ಹೆಚ್ಚುವುದರಿಂದ ಹಾಗೂ ಎಲ್ಲ ಮತಗಟ್ಟೆಗಳಲ್ಲೂ ವಿವಿಪ್ಯಾಟ್ ಅಳವಡಿಸುತ್ತಿರುವ ಕಾರಣ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಅವಧಿ ಹೆಚ್ಚಿಸುವ ಸಂಬಂಧ ಕೇಂದ್ರ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಕಳುಹಿಸಿದ್ದೆವು. ಅದಕ್ಕೆ ಒಪ್ಪಿಗೆ ನೀಡಿದೆ ಎಂದು ಅವರು ತಿಳಿಸಿದರು.
ಈಗಾಗಲೇ ಮತದಾನದ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಹಲವು ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರಲ್ಲದೆ, ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮತ ಚಲಾವಣೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Election Commissionಚುನಾವಣಾ ಆಯೋಗKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆvoting timeಮತದಾನ ಸಮಯ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


