ಹಾಲಿ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ
ಬಿಜೆಪಿ ಪಕ್ಷದ ಯಶವಂತಪುರ ವಿಧಾನಸಭೆ ಟಿಕೆಟ್ ಗೊಂದಲಕ್ಕೆ ತೆರೆ ಬಿದ್ದಿದ್ದು, ತಾವು ಹಾಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ.

Published On :
ಬೆಂಗಳೂರು: ಬಿಜೆಪಿ ಪಕ್ಷದ ಯಶವಂತಪುರ ವಿಧಾನಸಭೆ ಟಿಕೆಟ್ ಗೊಂದಲಕ್ಕೆ ತೆರೆ ಬಿದ್ದಿದ್ದು, ತಾವು ಹಾಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ.
ಹಾಲಿ ಲೋಕಸಭಾ ಸದಸ್ಯರಾಗಿರುವ ಶೋಭಾ ಕರಂದ್ಲಾಜೆ ಅವರು, ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಾಗಳು ಹರಿದಾಡುತ್ತಿತ್ತು. ಆದರೆ ಈ ಸುದ್ದಿಗೆ ಸಂಸದೆ ಶೋಭಾ ಕರದ್ಲಾಜೆ ತೆರೆ ಎಳೆದಿದ್ದು, ಯಾವುದೇ ಕಾರಣಕ್ಕೂ ನಾನು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಾರೆ ಎಂದು ಸ್ಪಷ್ಪಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಬಸವೇಶ್ವರ ಪುತ್ಥಳಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದ ಸಂಸದೆ ಶೋಭಾ, 'ಲೋಕಸಭಾ ಸದಸ್ಯತ್ವದ ಅವಧಿ ಇನ್ನು ಒಂದು ವರ್ಷವಿದೆ. ಅವಧಿ ಮುಗಿದ ನಂತರ ಪಕ್ಷವೇ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಸವೇಶ್ವರರಿಗೆ ಮಾಲಾರ್ಪಣೆ ಮಾಡುವ ಯೋಗ್ಯತೆ ಸಿದ್ದರಾಮಯ್ಯನವರಿಗೆ ಇಲ್ಲ, ಪ್ರತ್ಯೇಕ ಧರ್ಮ ಮಾಡುವ ಕೆಲಸ ಸಿದ್ದರಾಮಯ್ಯನವರದ್ದಲ್ಲ ಎಂದು ಹರಿಹಾಯ್ದರು. ಅಂತೆಯೇ ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಬಗ್ಗೆ ಸ್ವಾಮೀಜಿಗಳು, ಧರ್ಮ ಗುರುಗಳು ತೀರ್ಮಾನ ತೆಗೆದುಕೊಳ್ಳಬೇಕು. ನಾಗಮೋಹನ್ ದಾಸ್ ಸಮಿತಿಯಲ್ಲಿ ಒಬ್ಬರೇ ಒಬ್ಬರು ಲಿಂಗಾಯತ ವೀರಶೈವರು ಇರಲಿಲ್ಲ. ಇದರಲ್ಲೇ ಎಲ್ಲವೂ ಅರ್ಥವಾಗುತ್ತದೆ ಎಂದು ಸರ್ಕಾರವನ್ನು ಟೀಕಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengalurubjpಬಿಜೆಪಿPoliticsರಾಜಕೀಯShobha Karandlajeಶೋಭಾ ಕರಂದ್ಲಾಜೆKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


