ಮುಸ್ಲಿಮರ ಮತಗಳು ವಿಭಜನೆಯಾದರೂ ಕಾಂಗ್ರೆಸ್ ಗೆ ಅಲ್ಪಸಂಖ್ಯಾತ ಸಮುದಾಯದ ಮತ ಸಿಗುವ ವಿಶ್ವಾಸ
ಅಹಿಂದ ಕಾರ್ಡ್ ಮೂಲಕ ಚುನಾವಣೆ ಗೆಲ್ಲುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ಧತೆ ನಡೆಸಿದ್ದಾರೆ. ರಾಜಕೀಯ ವಿಶ್ಲೇಷಕರ ಪ್ರಕಾರ ಅಹಿಂದ ಸಂಘಟನೆಯ ಪೈಕಿ ಪ್ರಮುಖವಾಗಿ ಅಲ್ಪಸಂಖ್ಯಾತ (ಮುಸ್ಲಿಮರ)

Published On :
ಬೆಂಗಳೂರು: ಅಹಿಂದ ಕಾರ್ಡ್ ಮೂಲಕ ಚುನಾವಣೆ ಗೆಲ್ಲುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ಧತೆ ನಡೆಸಿದ್ದಾರೆ. ರಾಜಕೀಯ ವಿಶ್ಲೇಷಕರ ಪ್ರಕಾರ ಅಹಿಂದ ಸಂಘಟನೆಯ ಪೈಕಿ ಪ್ರಮುಖವಾಗಿ ಅಲ್ಪಸಂಖ್ಯಾತ (ಮುಸ್ಲಿಮರ) ಸಮುದಾಯ ಕಾಂಗ್ರೆಸ್ ಪರವಾಗಿದೆ.
ರಾಜ್ಯದಲ್ಲಿ ಶೇ.12-16 ರಷ್ಟು ಮುಸ್ಲಿಮ್ ಜನಸಂಖ್ಯೆ ಇದ್ದು, ಈ ಹಿಂದಿನ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿದ್ದಾರೆ. ಸಿದ್ದರಾಮಯ್ಯ ಅಧಿಕಾರದಲ್ಲಿ ಟಿಪ್ಪು ಜಯಂತಿ ಆಚರಣೆ ಅಸ್ತಿತ್ವಕ್ಕೆ ಬಂದಿದ್ದು, ಮುಸ್ಲಿಂ ಸಮುದಾಯದ ಬೆಂಬಲ ಕಾಂಗ್ರೆಸ್ ಗೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಆದರೆ ರಾಜ್ಯ ರಾಜಕಾರಣಕ್ಕೆ ಜೆಡಿಎಸ್, ಬಿಎಸ್ ಪಿ ಬೆಂಬಲದಿಂದ ಎಂಐಎಂ ಪಕ್ಷ ಎಂಟ್ರಿ ನೀಡಿರುವುದರಿಂದ ಮುಸ್ಲಿಂ ಮತಗಳು ವಿಭಜನೆಯಾಗುವ ಸಾಧ್ಯತೆ ಇದ್ದು, ಕಾಂಗ್ರೆಸ್ ಗೆ ಸ್ವಲ್ಪ ಮಟ್ಟಿಗಿನ ಹಿನ್ನಡೆಯುಂಟಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
ಇನ್ನು ಕರಾವಳಿ ಪ್ರದೇಶದಲ್ಲಿ ಎಸ್ ಡಿಪಿಐ ಸಂಘಟನೆ ಸಹ ಸಕ್ರಿಯವಾಗಿದ್ದು ಚುನಾವಣೆಗೆ ಸ್ಪರ್ಧಿಸುತ್ತಿರುವುದು ಕಾಂಗ್ರೆಸ್ ಗೆ ಸ್ವಲ್ಪ ಹಿನ್ನಡೆಯುಂಟಾಗಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ನಿಂದ ಮುಸ್ಲಿಂ ಸಮುದಾಯದ 26 ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕೆಂಬ ಒತಡವೂ ಇದ್ದು, ಇದಕ್ಕೆ ಕಾಂಗ್ರೆಸ್ ನಾಯಕ ಎ ರೆಹಮಾನ್ ಖಾನ್ ಸಹ ಒತ್ತಡ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಮುಸ್ಲಿಂ ಸಮುದಾಯದ ಬೇಡಿಕೆಯನ್ನು ತಳ್ಳಿಹಾಕಿದ್ದು, ಮುಸ್ಲಿಂ ಅಭ್ಯರ್ಥಿಗಳು ಗೆಲ್ಲುವ ಪ್ರದೇಶಗಳನ್ನು ಸಮೀಕ್ಷೆ ಮೂಲಕ ತಿಳಿದುಕೊಳ್ಳಲಾಗಿದ್ದು, ಟಿಕೆಟ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಒಟ್ಟಾರೆಯಾಗಿ ಎಂಐಎಂ, ಜೆಡಿಎಸ್, ಬಿಎಸ್ ಪಿ ಪಕ್ಷಗಳಿಂದ ಸ್ವಲ್ಪ ಮಟ್ಟಿಗೆ ಮುಸ್ಲಿಂ ಮತಗಳು ವಿಭಜನೆಯಾಗುವ ಸಾಧ್ಯತೆ ಇದ್ದರೂ ಕಾಂಗ್ರೆಸ್ ಮಾತ್ರ ಅಲ್ಪಸಂಖ್ಯಾತರ ಮತಗಳನ್ನು ಹೆಚ್ಚು ಪಡೆಯುವ ವಿಶ್ವಾಸದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್ಬಿಜೆಪಿSiddaramaiahಸಿದ್ದರಾಮಯ್ಯAhindaಅಹಿಂದKarnataka elections 2018ಕರ್ನಾಟಕ ಚುನಾವಣೆ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


