ಎಸ್ಎಂಕೆ, ಶ್ರೀನಿವಾಸ್ ಪ್ರಸಾದ್ ಮಾಸ್ ಲೀಡರ್ ಅಲ್ಲ, ಅವರಿಂದ ಬಿಜೆಪಿಗೆ ಯಾವ ಲಾಭವೂ ಇಲ್ಲ: ಪರಮೇಶ್ವರ್
218 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ನಂತರ ಆಂತರಿಕ ಸಮೀಕ್ಷೆ ನಡೆಸಲಾಗಿದೆ. ನಾವು ಸರಳ ಬಹುಮತ ಪಡೆಯುವ ವಿಶ್ವಾಸವಿದೆ...

Published On :
ಬೆಂಗಳೂರು: ಮೇ 12 ರಂದು ನಡೆಯುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ಇದುವರೆಗೂ ಘೋಷಿಸಿಲ್ಲ. ಆದರೆ ಈ ಸಂಬಂಧ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ಪಕ್ಷ ಗೆಲ್ಲುವುದೇ ನಮ್ಮ ಮೊದಲ ಆದ್ಯತೆ, ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದು ನಂತರದ ವಿಷಯ ಎಂದು ಹೇಳಿದ್ದಾರೆ.
218 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ನಂತರ ಆಂತರಿಕ ಸಮೀಕ್ಷೆ ನಡೆಸಲಾಗಿದೆ. ನಾವು ಸರಳ ಬಹುಮತ ಪಡೆಯುವ ವಿಶ್ವಾಸವಿದೆ’ ಎಂದು ಪರಮೇಶ್ವರ ಹೇಳಿದರು.‘ಪಕ್ಷದಲ್ಲಿ ಅಂಥ ಬಂಡಾಯವೇನೂ ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.
ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆಲ್ಲುತ್ತಾರೆ, ಸಿದ್ದರಾಮಯ್ಯ ನಾನು ಸೇರಿದಂತೆ ಎಲ್ಲರಿಗೂ ಪಕ್ಷ ಬಹುಮತ ಪಡೆಯುವುದು ಬೇಕಾಗಿದೆ. 113 ಸಿಟು ಗೆಲ್ಲಲು ನಮ್ಮ ಮೊದಲ ಆದ್ಯತೆ. ಸಿಎಂ ವಿಚಾರ ನಂತರದ್ದು ಎಂದು ತಿಳಿಸಿದ್ದಾರೆ,
ಟಿಕೆಟ್ ಕೈ ತಪ್ಪಿದ ಕಾರಣಕ್ಕೆ ಭಿನ್ನಮತೀಯ ಚಟುವಟಿಕೆ ಬೆನ್ನಲ್ಲೇ, ಬಂಡಾಯ ಮುಂದುವರಿದಿದೆ, ಒಂದು ಕ್ಷೇತ್ರದಲ್ಲಿ ಒಬ್ಬರಿಗೆ ಮಾತ್ರ ಟಿಕೆಟ್ ನೀಡಲು ಸಾಧ್ಯ. ಎಲ್ಲ ನಾಯಕರೂ ಜೊತೆಯಾಗಿ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಆನಂದ್ ಸಿಂಗ್ ಗೆ ಟಿಕೆಟ್ ನೀಡಿರುವುದು ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವುದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, ಸಿಂಗ್ ಮೊದಲು ಬಿಜೆಪಿಯಲ್ಲಿದ್ದರು, ನಂತರ್ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಾಸಕರಾಗಿದ್ದರು, ಕಾನೂನು ಹಾಗೂ ಜನರ ಅಭಿಮತ ವಿಭಿನ್ನವಾಗಿರುತ್ತದೆ.,ಜನರಿಗೆ ಅವರ ಕ್ಷೇತ್ರಗಳಲ್ಲಿ ನಾಗೇಂದ್ರ ಮತ್ತು ಆನಂದ್ ಸಿಂಗ್ ಸ್ಪರ್ದಿಸಬೇಕೆಂದು ಬಯಸಿದ್ದರು,ಹೀಗಾಗಿ ಅವರಿಗೆ ಟಿಕೆಟ್ ನೀಡಿರುವುದಾಗಿ ಸಮರ್ಥಿಸಿಕೊಂಡಿದ್ದಾರೆ.
ದೇಶದಲ್ಲೇ ಮೊದಲ ಬಾರಿಗೆ ಜೈಲಿಗೆ ಹೋಗಿ ಬಂದ ಮುಖ್ಯಮಂತ್ರಿ ಯಡಿಯೂರಪ್ಪ ಎಂದು ಪರಮೇಶ್ವರ್ ವ್ಯಂಗ್ಯವಾಡಿದ್ದಾರೆ.
ಹಿರಿಯ ಕಾಂಗ್ರೆಸ್ ಮುಖಂಡರಾದ ಎಸ್ ಎಂ ಕೃಷ್ಣ ಮತ್ತು ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರಿದ್ದರಿಂದ ಹಳೇ ಮೈಸೂರು ಬಾಗದಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ಪರಿಣಾಮವಾಗಿಲ್ಲ, ಈ ಇಬ್ಬರು ಸೇರಿದ್ದರಿಂದ ಬಿಜೆಪಿಗೆ ಯಾವ ಲಾಭವೂ ಆಗಿಲ್ಲ ಎಂದು ಟೀಕಿಸಿದ್ದಾರೆ. ಅವರಿಬ್ಬರೂ ಮಾಸ್ ಲೀಡರ್ ಅಲ್ಲ, ಅವರಿಂದ ರಾಜ್ಯದ ಯಾವುದೇ ಭಾಗದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಾನಿ ಉಂಟಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ,
ಶಾಂತಿನಗರ ವಿಧಾನಸಭೆ ಕ್ಷೇತ್ರಕ್ಕೆ ಇನ್ನು ಎರಡು ದಿನಗಳಲ್ಲಿ ಅಭ್ಯರ್ಥಿ ಘೋಷಿಸಲಾಗುವುದು ಎಂದ ಅವರು ಮೊಹಮದ್ ನಲಪಾಡ್ ನನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದರು.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಏಪ್ರಿಲ್ 26 ಮತ್ತು 7 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ, ಮತ್ತೆ ಮೇ 3 ಮತ್ತು 4 ರಂದು ಹಾಗೂ ಮೇ 8 ಮತ್ತು 10 ರಂದು ಕರ್ನಾಟಕದಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದರು. ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರಿಗೂ ಕರ್ನಾಟಕ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್MajorityಬಹುಮತG Parameshwaraಜಿ. ಪರಮೇಶ್ವರKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


