ಮಂಗಳೂರು: ಚುನಾವಣಾ ಹೋರಾಟಕ್ಕೆ 'ಅದೃಷ್ಟದ ಕಟ್ಟಡ'ದಿಂದ ಬಿಜೆಪಿ ರಣಕಹಳೆ!
ಬಿಜೆಪಿಯ ಮೂರನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೂ ಮುಂಚಿತವಾಗಿ ಇಲ್ಲಿನ ಬಂಟ್ಸ್ ಹೋಟೆಲ್ ಸರ್ಕಲ್ ನಲ್ಲಿರುವ ಅದೃಷ್ಟದ ಕಟ್ಟಡ ಎಂದೇ ಭಾವಿಸಲಾದ ಕಚೇರಿಯಿಂದ ಬಿಜೆಪಿ ರಣಕಹಳೆ ಮೊಳಗಿಸುತ್ತಿದೆ.

ಮಂಗಳೂರು : ಬಿಜೆಪಿಯ ಮೂರನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೂ ಮುಂಚಿತವಾಗಿ ಇಲ್ಲಿನ ಬಂಟ್ಸ್ ಹೋಟೆಲ್ ಸರ್ಕಲ್ ನಲ್ಲಿರುವ ಅದೃಷ್ಟದ ಕಟ್ಟಡ ಎಂದೇ ಭಾವಿಸಲಾದ ಕಚೇರಿಯಿಂದ ಬಿಜೆಪಿ ರಣಕಹಳೆ ಮೊಳಗಿಸುತ್ತಿದೆ.
ಈ ಬಾರಿಯ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಒಳ್ಳೆಯದಾಗಲಿದೆ ಎಂಬ ನಂಬಿಕೆಯಿಂದ ಬಿಜೆಪಿ ಅಭ್ಯರ್ಥಿಗಳು ಈ ಕಟ್ಟಡವನ್ನು ಚುನಾವಣಾ ಕಚೇರಿಗಳನ್ನಾಗಿ ಮಾಡಿಕೊಂಡಿದ್ದಾರೆ.
ಶಿಥಿಲಗೊಂಡ ಹೆಂಚುಗಳ ಮನೆಯನ್ನು 2004ರ ಚುನಾವಣೆಯಲ್ಲಿ ಮೊದಲ ಬಾರಿಗೆ ಬಳಸಿಕೊಳ್ಳಲಾಗಿತ್ತು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳುತ್ತಾರೆ.
2004ರಲ್ಲಿ ಏಕಕಾಲದಲ್ಲಿ ಲೋಕಸಭೆ ಹಾಗೂ ವಿಧಾನಸಭೆಗೆ ಚುನಾವಣೆ ನಡೆದ್ದಾಗ ಬಿಜೆಪಿ ಚುನಾವಣಾ ಕಚೇರಿಯನ್ನಾಗಿ ಈ ಕಟ್ಟಡವನ್ನು ಬಳಸಿಕೊಂಡಿತ್ತು. ಆಗ ಮಂಗಳೂರು ಲೋಕಸಭಾ ಕ್ಷೇತ್ರದ 8 ಕ್ಷೇತ್ರಗಳ ಪೈಕಿ 6ರಲ್ಲಿ ಬಿಜೆಪಿ ಜಯಗಳಿಸಿತ್ತು
ವೀರಪ್ಪಮೊಯ್ಲಿ ಅವರನ್ನು ಸೋಲಿಸಿ ಸದಾನಂದಗೌಡ ಸಂಸದರಾಗಿ ಆಯ್ಕೆಯಾಗಿದ್ದರು.
2009ರಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದಿಂದ ತಮ್ಮನ್ನು ಬಿಜೆಪಿ ಅಭ್ಯರ್ಥಿಯಾಗಿ ಮಾಡಿತ್ತು ಎಂದು ಕಟೀಲ್ ಹೇಳುತ್ತಾರೆ.
2013ರ ವಿಧಾನಸಭಾ ಚುನಾವಣೆಯಲ್ಲಿ ಪಿವಿಎಸ್ ವೃತ್ತದಲ್ಲಿರುವ ಬಿಜೆಪಿ ಪಕ್ಷದ ಕಚೇರಿಯನ್ನು ಚುನಾವಣಾ ಕಚೇರಿಯನ್ನಾಗಿ ಬಳಸಿಕೊಳ್ಳಲಾಗಿತ್ತು, ಇದರಿಂದಾಗಿ ಹಾನಿಕಾರಿಕ ರೀತಿಯ ಫಲಿತಾಂಶ ಬಂದಿತ್ತು .
2014ರ ಲೋಕಸಭಾ ಚುನಾವಣೆಯಲ್ಲಿ ಈ ಕಟ್ಟಡವನ್ನು ಬಿಜೆಪಿ ಕಚೇರಿಯನ್ನಾಗಿ ಮಾಡಿಕೊಂಡಿದ್ದರಿಂದ ಒಂದೂವರೆ ಲಕ್ಷ ಮತಗಳಿಂದ ಜಯಗಳಿಸಿದ್ದಾಗಿ ನಳಿನ್ ಕುಮಾರ್ ಕಟೀಲ್ ನೆನಪು ಮಾಡಿಕೊಳ್ಳುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


