ಜೆಡಿಎಸ್ ಗೆ ಸ್ಯಾಂಡಲ್ ವುಡ್ ಸ್ಟಾರ್ ಗಳ ಬೆಂಬಲ, ಜೆಡಿಎಸ್ ಗೆ ಮತನೀಡಿ ಎಂದ ನಟಿ ರಚಿತಾ ರಾಮ್!
ರಾಜ್ಯ ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದಂತೆ ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ತಾರಕಕ್ಕೇರಿದ್ದು, ಇದಕ್ಕೆ ಹೊಸ ಸೇರ್ಪಡೆ ಎಂಬಂತೆ ಇದೀಗ ಸ್ಯಾಂಡಲ್ ವುಡ್ ನ ನಟ-ನಟಿಯರೂ ಕೂಡ ರಾಜಕೀಯ ಪಕ್ಷಗಳ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ.

Published On :
ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದಂತೆ ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ತಾರಕಕ್ಕೇರಿದ್ದು, ಇದಕ್ಕೆ ಹೊಸ ಸೇರ್ಪಡೆ ಎಂಬಂತೆ ಇದೀಗ ಸ್ಯಾಂಡಲ್ ವುಡ್ ನ ನಟ-ನಟಿಯರೂ ಕೂಡ ರಾಜಕೀಯ ಪಕ್ಷಗಳ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ.
ಇದಕ್ಕೆ ಹೊಸ ಸೇರ್ಪಡೆ ಎಂಬಂತೆ ಸ್ಯಾಂಡಲ್ ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಪರ ಪ್ರಚಾರ ನಡೆಸಿದ್ದಾರೆ. ಮತದಾನದ ಮಹತ್ವದ ಕುರಿತ ವಿಡಿಯೋವೊಂದರಲ್ಲಿ ಮಾತನಾಡಿರುವ ನಟಿ ರಚಿತಾ ರಾಮ್ ಕರ್ನಾಟಕ ರಾಜ್ಯ ಅಭಿವೃದ್ಧಿ ಕಡೆ ನಡೆಯಲು ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿ ಎಂದು ಮನವಿ ಮಾಡಿದ್ದಾರೆ.
"ಕರ್ನಾಟಕ ರಾಜ್ಯ ಅಭಿವೃದ್ಧಿಗೆ ಕುಮಾರಸ್ವಾಮಿ ಅವರು ತಮ್ಮ 20 ತಿಂಗಳ ಆಡಳಿತ ಅವಧಿಯಲ್ಲಿ ಮಾಡಿರುವ ಸಾಧನೆ ಉದಾಹರಣೆಯಾಗಿದೆ. ರಾಜ್ಯದಲ್ಲಿ ರೈತರ ಪರ ಹೋರಾಟ ನಡೆಸುವ ನಾಯಕರ ಅಗತ್ಯವಿದ್ದು, ಕುಮಾರ ಸ್ವಾಮಿಯವರು ಒಳ್ಳೆಯ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಕರ್ನಾಟಕ ಭವಿಷ್ಯಕ್ಕಾಗಿ ಕುಮಾರ ಸ್ವಾಮಿ ಅವರು ಮುಖ್ಯಮಂತ್ರಿ ಆಗುವುದು ಬಹಳ ಮುಖ್ಯವಾಗಿದ್ದು, ಜೆಡಿಎಸ್ ಪಕ್ಷಕ್ಕೆ ಮತ ನೀಡಿ" ಎಂದು ವಿಡಿಯೋದಲ್ಲಿ ನಟಿ ರಚಿತಾ ರಾಮ್ ಕೇಳಿಕೊಂಡಿದ್ದಾರೆ.
ನಟಿ ರಚಿತಾರಾಮ್ ಅವರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
JDSPoliticsರಾಜಕೀಯಜೆಡಿಎಸ್Sandalwoodಸ್ಯಾಂಡಲ್ ವುಡ್HD KumaraswamyRachita Ramರಚಿತಾ ರಾಮ್ಹೆಚ್ ಡಿ ಕುಮಾರಸ್ವಾಮಿKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


