ಇಂಗ್ಲೀಷ್ ನಲ್ಲಿ ಸಹಿ ಮಾಡಿ ಎಂದ ಅಧಿಕಾರಿಗೆ ಸಿಎಂ ಹೇಳಿದ್ದೇನು ಗೊತ್ತಾ?
ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಕನ್ನಡ ಪ್ರೇಮ ಅನಾವರಣಕ್ಕೆ ರಾಜ್ಯ ವಿಧಾನಸಭೆ ಚುನಾವಣೆ ವೇದಿಕೆ ಕಲ್ಪಿಸಿಕೊಟ್ಟಿತ್ತು.

Published On :
ಮೈಸೂರು: ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಕನ್ನಡ ಪ್ರೇಮ ಅನಾವರಣಕ್ಕೆ ರಾಜ್ಯ ವಿಧಾನಸಭೆ ಚುನಾವಣೆ ವೇದಿಕೆ ಕಲ್ಪಿಸಿಕೊಟ್ಟಿತ್ತು.
ಹೌದು. ಇಂದು ತಮ್ಮ ತವರು ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಬೆಂಬಲಿಗರೊಂದಿಗೆ ಮೆರವಣಿಗೆ ತೆರಳಿ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು. ಈ ವೇಳೆ ಭಿಫಾರಂ ಸಲ್ಲಿಕೆ ಮಾಡಿದ ಸಿಎಂ ದಾಖಲೆಗಳಿಗೆ ಸಹಿ ಹಾಕಿದರು. ಸಿಎಂ ಸಿದ್ದರಾಮಯ್ಯ ಕನ್ನಡದಲ್ಲಿ ಸಹಿ ಮಾಡುತ್ತಿರುವುದನ್ನು ಕಂಡ ಚುನಾವಣಾ ಅಧಿಕಾರಿಯೊಬ್ಬರು, ಇಂಗ್ಲೀಷ್ ನಲ್ಲಿ ಸಹಿ ಮಾಡುವಂತೆ ಮನವಿ ಮಾಡಿಕೊಂಡರು.
ಆಗ ಚುನಾವಣಾ ಅಧಿಕಾರಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕನ್ನಡದಲ್ಲೇ ಸಹಿ ಮಾಡುವುದಾಗಿ ಹೇಳಿದರು. ಅಲ್ಲದೆ ಇಂಗ್ಲೀಷ್ ಬಾರದವರು ಏನು ಮಾಡಬೇಕು. ಇಂಗ್ಲೀಷ್ ನಲ್ಲಿ ಮಾತ್ರ ಸಹಿ ಹಾಕಬೇಕು ಎಂದು ನಿಯಮವೇನಾದರೂ ಇದೆಯೇ ಎಂದು ಪ್ರಶ್ನೆ ಮಾಡಿದರು. ಅಲ್ಲದೆ ಕನ್ನಡದಲ್ಲೇ ಸಹಿ ಹಾಕಿ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು.
ಉಮೇದುವಾರಿಕೆ ಸಲ್ಲಿಕೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ, '1983 ರಲ್ಲಿ ಮೊದಲ ಬಾರಿಗೆ ನಾಮಪತ್ರ ಸಲ್ಲಿಸಿದ್ದಾಗ ನನಗೆ ಆತಂಕ ಇತ್ತು. ಈಗ ನನಗೆ ಯಾವುದೇ ಆತಂಕ ಇಲ್ಲ. ತುಂಬಾ ಸಮಾಧಾನದಿಂದ ಇದ್ದೇನೆ. ನನಗೆ ರಾಜಕೀಯದಲ್ಲಿ ಶತ್ರುಗಳು, ಹಿತ ಶತ್ರುಗಳು ಯಾರು ಇಲ್ಲ. ಕೇವಲ ರಾಜಕೀಯ ವಿರೋಧಿಗಳು ಇದ್ದಾರೆ ಅಷ್ಟೇ. ಚಾಮುಂಡೇಶ್ವರಿ ಜನ ನನಗೆ ಆಶೀರ್ವಾದಿಸುತ್ತಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PoliticsರಾಜಕೀಯಮೈಸೂರುSiddaramaiahಸಿದ್ದರಾಮಯ್ಯMysuruKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆAssets Declarationಆಸ್ತಿ ಘೋಷಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


