ಅಂಬರೀಷ್ ಮನವೊಲಿಸಲು ಮುಂದಾಗಿಲ್ಲ- ಸಿಎಂ: ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ- ರೆಬೆಲ್ ಸ್ಟಾರ್
ನಾನು ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ನಟ ಹಾಗೂ ಮಾಜಿ ಸಚಿವ ಅಂಬರೀಷ್ ಕಡ್ಡಿ ತುಂಡು ಮಾಡಿದಂತೆ ಹೇಳಿದ್ದಾರೆ....

Published On :
ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ನಟ ಹಾಗೂ ಮಾಜಿ ಸಚಿವ ಅಂಬರೀಷ್ ಕಡ್ಡಿ ತುಂಡು ಮಾಡಿದಂತೆ ಹೇಳಿದ್ದಾರೆ. ಮಂಡ್ಯ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವಂತೆ ಆಂಬರೀಷ್ ಅವರ ಮನವೊಲಿಸಲು ತೆರಳಿದ್ದ ಸಚಿವ ಜಾರ್ಜ್ ಹಾಗೂ ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡ ಅಮರಾವತಿ ಚಂದ್ರಶೇಖರ್ ಬರಿಗೈಯಲ್ಲಿ ವಾಪಾಸಾಗಿದ್ದಾರೆ.
ನಾನು ವಸತಿ ಸಚಿವನಾಗಿದ್ದಾಗ ಉತ್ತಮ ಕೆಲಸ ಮಾಡ್ತಿದ್ದೆ, ಅದಕ್ಕಾಗಿ ನನಗೆ ಪ್ರಶಸ್ತಿ ಕೂಡ ಬಂದಿತ್ತು, ನನ್ನನ್ನು ಬಲವಂತವಾಗಿ ರಾಜೀನಾಮೆ ನೀಡುವಂತೆ ಮಾಡಿದ್ದೀರಿ, ಆಗ ರಾಜಿನಾಮೆ ಕೊಡಿಸಿ ಈಗ ಸ್ಪರ್ಧಿಸುವಂತೆ ಯಾಕೆ ಒತ್ತಾಯಿಸುತ್ತಿದ್ದೀರಿ ಎಂದು ಅಂಬರೀಷ್ ಪ್ರಶ್ನಿಸಿದ್ದಾರೆ, ಜೊತೆಗೆ ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬ ಮಾಹಿತಿಯನ್ನು ಕಾಂಗ್ರೆಸ್ ಮುಖಂಡರಿಗೆ ರವಾನಿಸಿದ್ದಾರೆ.
ಇನ್ನು ಮೈಸೂರಿನಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಅಂಬರೀಷ್ ಅವರ ಮನವೊಲಿಸಲು ಯಾವುದೇ ಮಾತುಕತೆ ನಡೆಸಲು ಮುಂದಾಗಿಲ್ಲ ಎಂದು ಹೇಳಿದ್ದಾರೆ, ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ನೀವು ಯಾಕೆ ಇದ್ದನ್ನು ವಿಷ್ಯ ಮಾಡುತ್ತೀರಿ. ಬಿ ಫಾರಂ ನೀಡುವುದು ನಾನಲ್ಲ, ಪಕ್ಷದ ಅಧ್ಯಕ್ಷರು. ಅಂಬರೀಷ್ ಅವರಿಗೆ ಟಿಕೆಟ್ ನೀಡಿದ್ದೇವೆ ಅವರು ಸ್ಪರ್ಧಿಸಬೇಕು ಅಷ್ಟೇ' ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯಅಂಬರೀಷ್ಮಂಡ್ಯMandyaAmbareeshಕರ್ನಾಟಕ ವಿಧಾನಸಭೆ ಚುನಾವಣೆKarnataka Assembly Elections
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


