ರಾಜಕೀಯ

ಬಾದಾಮಿಯಿಂದ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಅಧಿಕೃತ, ಏ.24ಕ್ಕೆ ನಾಮಪತ್ರ ಸಲ್ಲಿಕೆ

ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸಲು....

ಬಾದಾಮಿಯಿಂದ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಅಧಿಕೃತ, ಏ.24ಕ್ಕೆ ನಾಮಪತ್ರ ಸಲ್ಲಿಕೆ
ಸಿದ್ದರಾಮಯ್ಯ
Published On :
ಬೆಂಗಳೂರು: ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸಲು ನಿರ್ಧರಿಸಿದ್ದು, ಏಪ್ರಿಲ್ 24ಕ್ಕೆ ಅಧಿಕೃತವಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ.
ಈಗಾಗಲೇ ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿರುವ ಸಿದ್ದರಾಮಯ್ಯ ಅವರು ಮಂಗಳವಾರ ಬಾದಾಮಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ. 
ಬಾದಾಮಿಯಿಂದ ಸಿಎಂ ಸ್ಪರ್ಧಿಸುವುದು ಖಚಿತವಾಗುತ್ತಿದ್ದಂತೆ ಸಿದ್ದರಾಮಯ್ಯ ಅವರ ನಿವಾಸಕ್ಕೆ ಬಾದಾಮಿಯ ನಾಯಕರು ಆಗಮಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ ಸಿಎಂ ಸ್ವಾಗತಕ್ಕೆ ಬಾದಾಮಿಯಲ್ಲಿ ಬೆಂಬಲಿಗರಿಂದ ಭರದ ಸಿದ್ಧತೆ ನಡೆಯುತ್ತಿದೆ.
ಇನ್ನು ಸಿದ್ದರಾಮಯ್ಯ ಅವರು ಬಾದಾಮಿಯಲ್ಲಿ ಕಣಕ್ಕಿಳಿದರೆ ಅವರ ವಿರುದ್ದ ಬಿಜೆಪಿಯಿಂದ ಯಾರು ಕಣಕ್ಕಿಳಿಯಲಿದ್ದಾರೆಂಬುದು ಇನ್ನೂ ಬಹಿರಂಗವಾಗಿಲ್ಲ. ಆದರೆ ಶ್ರೀರಾಮುಲು ಅವರನ್ನು ಕಣಕ್ಕೆ ಇಳಿಸುವ ಬಗ್ಗೆ ಚಿಂತನೆ ನಡೆದಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.