ನೀವು ಜೈನ್ ಅಲ್ಲ ಎಂಬುದನ್ನು ದಾಖಲೆಯೊಂದಿಗೆ ಸಾಬೀತು ಮಾಡಿ: ಅಮಿತ್ ಶಾಗೆ ಸಿಎಂ ಸಿದ್ದರಾಮಯ್ಯ
ಜೈನನಲ್ಲ ಎಂಬುದನ್ನು ದಾಖಲೆಗಳೊಂದಿಗೆ ಸಾಬೀತು ಮಾಡಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ...

Published On :
ಮೈಸೂರು: ಜೈನನಲ್ಲ ಎಂಬುದನ್ನು ದಾಖಲೆಗಳೊಂದಿಗೆ ಸಾಬೀತು ಮಾಡಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಶುಕ್ರವಾರ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿರುವ ಅವರು, ಅಮಿತ್ ಶಾ ಅವರು ತಾವು ಜೈನನಲ್ಲ, ಹಿಂದೂ ವೈಷ್ಣವ ಎಂದು ಹೇಳಿದ್ದಾರೆ. ಜೈನನಲ್ಲ ಎಂದು ಹೇಳುತ್ತಿರುವ ಶಾ ಅವರು ದಾಖಲೆಗಳ ಸಮೇತ ಸಾಬೀತು ಮಾಡಲಿ ಎಂದು ಸವಾಲು ಹಾಕಿದ್ದಾರೆ.
ನನ್ನನ್ನು ಅಹಿಂದು ಎಂದು ಕರೆದಿರುವ ಅಮಿತ್ ಶಾ ಅವರಿಗಿಂತ ನಾನು ಉತ್ತಮ ಹಿಂದು, ಮನುಷ್ಯತ್ವ ಇರುವ, ಮಾನವೀಯ ಮೊಲ್ಯಗಳಲ್ಲಿ ನಂಬಿಕೆ ಇರುವ ಹಿಂದು. ಹೆಣದ ಮೇಲೆ ರಾಜಕೀಯ ಮಾಡುವವರು ನನಗೆ ಹೇಳಲು ಬರುತ್ತಾರೆ. ಅಧಿಕಾರ ಇದ್ದಾಗ ದಲಿತರ ಮನೆಗೆ ಹೋಗದವರು, ಮಂಗಳೂರು ಗಲಭೆಯಲ್ಲಿ ಮೃತಪಟ್ಟ ಇಬ್ಬರ ಪೈಕಿ ಒಬ್ಬರ ಮನೆಗೆ ಹೋಗವವವರು, ಸಂವಿಧಾನ ಬದಲು ಮಾಡುತ್ತೇವೆನ್ನುವವರು ನನ್ನ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ಸರ್ಕಾರದ ವಿರುದ್ಧ ಪ್ರಭುತ್ವ ವಿರೋಧಿ ಅಲೆ ಇಲ್ಲ. ಹೀಗಾಗಿ ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು, ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಅಪಘಾತ ಕುರಿತು ಅನಂತ್ ಕುಮಾರ್ ಹೆಗಡೆ ಮಾಡಿದ್ದ ಅರೋಪಕ್ಕೆ ತೀವ್ರವಾಗಿ ಕಿಡಿಕಾರಿರುವ ಅವರು, ಪ್ರತಿಯೊಂದು ಘಟನೆಗೂ ಸರ್ಕಾರವನ್ನು ದೂಷಿಸುವುದು ಹಾಸ್ಯಸ್ಪದವಾಗಿದೆ ಎಂದಿದ್ದಾರೆ. ಒಬ್ಬ ಸಚಿವರಾಗಿ ಅಧಾರ ರಹಿತ ಹೇಳಿಕೆಗಳನ್ನು ನೀಡಬಾರದು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


