ರಾಜಕೀಯ

ಬಿಜೆಪಿಯಲ್ಲಿ ಮತ್ತೆ ಸಕ್ರಿಯವಾದ ಬಳ್ಳಾರಿ ಗ್ಯಾಂಗ್: ಬಿಎಸ್ ವೈ ಜೊತೆ ವೇದಿಕೆ ಹಂಚಿಕೊಂಡ ರೆಡ್ಡಿ

ಮಪತ್ರ ಸಲ್ಲಿಕೆ ನಂತರ ಬಹಿರಂಗ ಸಮಾವೇಶ ಏರ್ಪಡಿಸಲಾಗಿತ್ತು, ಈ ಸಮಾವೇಶದಲ್ಲಿ ಯಡಿಯೂರಪ್ಪ ಜೊತೆ ಗಣಿಧಣಿ ಜನಾರ್ದನ ರೆಡ್ಡಿ ..

ಬಿಜೆಪಿಯಲ್ಲಿ ಮತ್ತೆ ಸಕ್ರಿಯವಾದ ಬಳ್ಳಾರಿ ಗ್ಯಾಂಗ್: ಬಿಎಸ್ ವೈ ಜೊತೆ ವೇದಿಕೆ ಹಂಚಿಕೊಂಡ  ರೆಡ್ಡಿ
ಮೊಳಕಾಲ್ಮೂರು ನಲ್ಲಿ ನಡೆದ ಸಮಾವೇಶದಲ್ಲಿ ಬಿಜೆಪಿ ಮುಖಂಡರ ಜೊರೆ
Published On :
ಮೊಳಕಾಲ್ಮೂರು: ಬಿಜೆಪಿಯ ಮೊಳಕಾಲ್ಮೂರು ಕ್ಷೇತ್ರದ ಅಭ್ಯರ್ಥಿಯಾಗಿ ಸಂಸದ ಬಿ.ಶ್ರೀರಾಮುಲು ನಾಮಪತ್ರ ಸಲ್ಲಿಸಿದರು, ಈ ವೇಳೆ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಮತ್ತು ಮಧ್ಯ ಪ್ರದೇಶ ಮುಖ್ಯಮಂತ್ರಿ ಹಾಜರಿದ್ದರು. 
ನಾಮಪತ್ರ ಸಲ್ಲಿಕೆ ನಂತರ  ಬಹಿರಂಗ ಸಮಾವೇಶ ಏರ್ಪಡಿಸಲಾಗಿತ್ತು, ಈ ಸಮಾವೇಶದಲ್ಲಿ ಯಡಿಯೂರಪ್ಪ ಜೊತೆ ಗಣಿಧಣಿ ಜನಾರ್ದನ ರೆಡ್ಡಿ ವೇದಿಕೆ ಹಂಚಿಕೊಂಡಿದ್ದು ಎಲ್ಲರ ಹುಬ್ಬೇರುವಂತೆ ಮಾಡಿದೆ. 
7 ವರ್ಷಗಳ ಹಿಂದೆ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ರೆಡ್ಡಿ ಮತ್ತೆ ಹೊಸ ಹುರುಪಿನೊಂದಿಗೆ ಬಿಜೆಪಿಗೆ ಬಂದಿದ್ದಾರೆ, ಜೊತೆಗೆ ಪಕ್ಷದ ಪ್ರಮುಖ ಮುಖಂಡರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ,
ಜನಾರ್ದನ ರೆಡ್ಡಿ ಸಹೋದರರಾದ ಸೋಮಶೇಖರ ರೆಡ್ಡಿ ಮತ್ತು ಕರುಣಾಕರ ರೆಡ್ಡಿ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಇತ್ತೀಚೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಜನಾರ್ದನ ರೆಡ್ಡಿಗೂ ಪಕ್ಷಕ್ಕೂ ಯಾವುದೇ ಸಂಬಂಧ ವಿಲ್ಲ ಎಂಬ ಹೇಳಿಕೆ ನೀಡಿ ಜನಾರ್ದನ ರೆಡ್ಡಿಗೆ ಅವಮಾನ ಮಾಡಿದ್ದರು, ಆದರೆ ಇದ್ಯಾವುದನ್ನು ಪರಿಗಣಿಸದ ಜನಾರ್ದನ ರೆಡ್ಡಿ, ಸ್ನೇಹಿತ ಶ್ರೀರಾಮುಲು ನಾಮಪತ್ರ ಸಲ್ಲಿಕೆಗೆ ಹಾಜರಾಗಿದ್ದರು,
ಜೈಲಿನಿಂದ  ಹೊರ ಬಂದ ಮೇಲೆ ಮೊದಲ ಬಾರಿಗೆ ಬಿಜೆಪಿ ಮುಖಂಡರು  ಜನಾರ್ದನ ರೆಡ್ಡಿ ಅವರ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ,  ವೇದಿಕೆ ಮೇಲೆ ಯಡಿಯೂರಪ್ಪ ಅವರ ಕಾಲಿಗೆ ನಮಸ್ಕರಿಸಿದ ರೆಡ್ಡಿ ನಂತರ ಅವರನ್ನು ಅಪ್ಪಿಕೊಂಡರು. 2013 ರಲ್ಲಿ ಚುನಾವಣೆಯಿಂದ ದೂರ ಉಳಿದಿದ್ದ ಜನಾರ್ದನ ರೆಡ್ಡಿ, ಈಗ ತಮ್ಮ ಆಪ್ತ ಸ್ನೇಹಿತ ಶ್ರೀರಾಮುಲಗಾಗಿ  ಪ್ರಚಾರ ನಡೆಸಲು ಬಂದಿದ್ದಾರೆ. 
ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಮುಂದಾಗಿರು ರೆಡ್ಡಿ , ಚಿತ್ರದುರ್ಗ ಮಾತ್ರವಲ್ಲದೇ, ಬಳ್ಳಾರಿ,  ಕೊಪ್ಪಳ ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಪ್ರಚಾರದಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಕಿತ್ತೊಗೆದು ಬಿಜೆಪಿ ಅಧಿಕಾರಕ್ಕೆ ತರಲು ತಮ್ಮ ಪಕ್ಷಕ್ಕೆ ಮತ ಹಾಕುವಂತೆ ರೆಡ್ಡಿ ಮತದಾರರ ಬಳಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.