ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಲು ಸಿದ್ಧ: ಬಿಎಸ್ ವೈ
ಮೈಸೂರಿನ ಚಾಮುಂಡೇಶ್ವರಿಯಲ್ಲಿ ಸೋಲುವ ಭೀತಿಯಿಂದ ಬಾಗಲಕೋಟೆ ಜಿಲ್ಲೆಯ ಬಾದಾಮಿಯಿಂದಲೂ....

Published On :
ಚಿಕ್ಕಮಗಳೂರು: ಮೈಸೂರಿನ ಚಾಮುಂಡೇಶ್ವರಿಯಲ್ಲಿ ಸೋಲುವ ಭೀತಿಯಿಂದ ಬಾಗಲಕೋಟೆ ಜಿಲ್ಲೆಯ ಬಾದಾಮಿಯಿಂದಲೂ ಸ್ಪರ್ಧಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸ್ಪರ್ಧಿಸಲು ತಾವು ಸಿದ್ಧ ಎಂದು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಹಾಗೂ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಭಾನುವಾರ ಹೇಳಿದ್ದಾರೆ.
ನಮ್ಮ ಪಕ್ಷ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ಅವರು ಬಯಸಿದರೆ ತಾವು ಬಾದಾಮಿಯಿಂದಲೂ ಸ್ಪರ್ಧಿಸಲು ಸಿದ್ಧ. ಬಾದಾಮಿ ಅಭ್ಯರ್ಥಿ ಕುರಿತು ಅಮಿತ್ ಶಾ ಅವರು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಒಂದು ವೇಳೆ ಸಿಎಂ ವಿರುದ್ಧ ಸ್ಪರ್ಧಿಸುವಂತೆ ನನಗೆ ಸೂಚಿಸಿದರೆ ನಾನು ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದು ಬಿಎಸ್ ವೈ ತಿಳಿಸಿದ್ದಾರೆ.
ಬಾದಾಮಿ ಅಭ್ಯರ್ಥಿ ಬಗ್ಗೆ ಈಗಾಗಲೇ ನಿರ್ಧರಿಸಲಾಗಿದ್ದು, ಸಿದ್ದರಾಮಯ್ಯ ಅವರನ್ನು ಸೋಲಿಸಲು ಪ್ರಬಲ ಅಭ್ಯರ್ಥಿಯನ್ನೇ ಕಣಕ್ಕಿಳಿಸಲಾಗುವುದು ಎಂದು ಯಡಿಯೂರಪ್ಪ ವರದಿಗಾರರಿಗೆ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಖ್ಯಮಂತ್ರಿ ಅಭ್ಯರ್ಥಿ ಯಡಿಯೂರಪ್ಪ ಅವರನ್ನೇ ಕಣಕ್ಕಿಳಿಸಿ ತೀವ್ರ ಸ್ಪರ್ಧೆ ಒಡ್ಡಲು ಬಿಜೆಪಿ ವರಿಷ್ಠರು ಮುಂದಾಗಿದ್ದಾರೆ ಎನ್ನಲಾಗುತ್ತಿದ್ದು, ಸಂಸದ ಬಿ ಶ್ರೀರಾಮುಲು ಮತ್ತು ಪಿ.ಸಿ.ಗದ್ದಿಗೌಡರ್ ಹೆಸರು ಸಹ ಮುಂಚೂಣಿಯಲ್ಲಿದೆ. ಈಶ್ವರಪ್ಪ ಹಾಗೂ ಬಾದಾಮಿ ಮಾಜಿ ಶಾಸಕ ಎಂ.ಕೆ.ಪಟ್ಟಣಶೆಟ್ಟಿ ಆಯ್ಕೆಯನ್ನೂ ಬಿಜೆಪಿ ಮುಕ್ತವಾಗಿರಿಸಿದೆ.
ಒಂದು ವೇಳೆ, ಯಡಿಯೂರಪ್ಪ ಅವರು ಬಾದಾಮಿಯಿಂದಲೂ ಕಣಕ್ಕಿಳಿದರೆ ಮೂರೂ ಪಕ್ಷಗಳ ಮುಖ್ಯಮಂತ್ರಿ ಅಭ್ಯರ್ಥಿಗಳು ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದಂತಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


