ಬಾದಾಮಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿಯಿಂದ ಶ್ರೀರಾಮುಲು ಸ್ಪರ್ಧೆ
ತೀವ್ರ ಕುತೂಹಲ ಕೆರಳಿಸಿದ್ದ ಬಾದಾಮಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಿದ್ದು ಸಿದ್ದರಾಮಯ್ಯ

Published On :
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಬಾದಾಮಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಿದ್ದು ಸಿದ್ದರಾಮಯ್ಯ ಅವರಿಗೆ ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ಶ್ರೀರಾಮುಲು ಕಣಕ್ಕಿಳಿಯಲಿದ್ದಾರೆ.
ಬಾದಾಮಿ ಕ್ಷೇತ್ರದಿಂದ ನಾಳೆ ಶ್ರೀರಾಮುಲು ಉಮೇದುವಾರಿಕೆ ಸಲ್ಲಿಸುತ್ತಿದ್ದು ಈ ವೇಳೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ಪ್ರಹ್ಲಾದ್ ಜೋಶಿ ಉಪಸ್ಥಿತರಿರಲಿದ್ದಾರೆ.
ನಾಳೆ ಮಧ್ಯಾಹ್ನ 12.30ರ ಸುಮಾರಿಗೆ ನಾಮಪತ್ರ ಸಲ್ಲಿಸಲಿದ್ದು ಈ ವೇಳೆ ಭಾರೀ ಪ್ರಮಾಣದಲ್ಲಿ ಬಿಜೆಪಿ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
ಶ್ರೀರಾಮುಲು ಅವರು ಮೊಳಕಾಲ್ಮೂರು ಕ್ಷೇತ್ರದಿಂದಲೂ ಸ್ಪರ್ಧಿಸುತ್ತಿದ್ದು ನಿನ್ನೆ ಬಿಜೆಪಿ ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಯಡಿಯೂರಪ್ಪ, ಮಾಜಿ ಸಚಿವ ಜನಾರ್ದನ ರೆಡ್ಡಿ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿSiddaramaiahಸಿದ್ದರಾಮಯ್ಯSriramuluಶ್ರೀರಾಮುಲುKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆಬಾದಾಮಿ ಕ್ಷೇತ್ರBadami Constituency
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


