ವರುಣಾದಲ್ಲಿ 37 ವರ್ಷದಿಂದ ಕೆಲಸ ಮಾಡಿದ್ದೇನೆ: ನಾಮಪತ್ರ ಸಲ್ಲಿಕೆ ಬಳಿಕ ಬಿಜೆಪಿ ಅಭ್ಯರ್ಥಿ ಬಸವರಾಜು ಹೇಳಿಕೆ
ದಿಢೀರ್ ಗೊಂದಲಕ್ಕೀಡಾಗಿದ್ದ ವರುಣಾ ಕ್ಷೇತ್ರದಲ್ಲಿ ಕೊನೆಗೂ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಟಿ ಬಸವರಾಜು ವರುಣಾ ಕ್ಷೇತ್ರದಿಂದ ನಾಪಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Published On :
ಮೈಸೂರು: ದಿಢೀರ್ ಗೊಂದಲಕ್ಕೀಡಾಗಿದ್ದ ವರುಣಾ ಕ್ಷೇತ್ರದಲ್ಲಿ ಕೊನೆಗೂ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಟಿ ಬಸವರಾಜು ವರುಣಾ ಕ್ಷೇತ್ರದಿಂದ ನಾಪಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಮಾಧ್ಯಮಗಳು ವರದಿ ಮಾಡಿರುವಂತೆ ನಂಜನಗೂಡು ತಾಲ್ಲೂಕು ಕಚೇರಿಯಲ್ಲಿ ಟಿ ಬಸವರಾಜು ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ. ಬಿಜೆಪಿ ಮುಖಂಡ ಶಿವಣ್ಣ ಅವರು ಬಸವರಾಜು ಅವರಿಗೆ ಬಿಫಾರಂ ರವಾನೆ ಮಾಡಿದರು.
ಇನ್ನು ಬಸವರಾಜು ಅವರು ವರುಣಾ ಕ್ಷೇತ್ರದ ಬಿಜೆಪಿ ಬ್ಲಾಕ್ ಘಟಕದ ಅಧ್ಯಕ್ಷರಾಗಿದ್ದು, ಆರ್ ಎಸ್ ಎಸ್ ಮುಖಂಡ ಸಂತೋಷ್ ಅವರ ಆಪ್ತರು ಎನ್ನಲಾಗಿದೆ.
ವಿಜಯೇಂದ್ರ ಬಂದು 20 ದಿನ ಆಯ್ತು, ನಾನು 37 ವರ್ಷಗಳಿಂದ ಬಿಜೆಪಿಗೆ ದುಡಿದಿದ್ದೇನೆ
ಇನ್ನು ನಾಮಪತ್ರ ಸಲ್ಲಿಕೆ ವೇಳೆ ಮಾತನಾಡಿದ ಟಿ ಬಸವರಾಜು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ವರುಣಾ ಕ್ಷೇತ್ರಕ್ಕೆ ಬಂದು ಕೇವಲ 20 ದಿನ ಆಯ್ತು. ನಾನು 37 ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿದ್ದೇನೆ. ವರುಣಾದಲ್ಲಿ ವಿಜಯೇಂದ್ರ ಅಭ್ಯರ್ಥಿಯಾಗಿ ಪ್ರಚಾರ ಮಾಡಿಲ್ಲ. ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು ಅಷ್ಟೇ.
ರಾಜ್ಯದ ಜನತೆ ನನಗೆ ಕೊನೆ ಕ್ಷಣದಲ್ಲಿ ಟಿಕೆಟ್ ಸಿಕ್ಕಿದೆ ಅಂತಾ ತಿಳಿದುಕೊಂಡಿರಬಹುದು. ಆದರೆ ಹೈಕಮಾಂಡ್ ಈ ಮೊದಲೇ ನಾನೇ ವರುಣಾ ಕ್ಷೇತ್ರದ ಅಭ್ಯರ್ಥಿಯೆಂದು ಹೇಳಿತ್ತು. ಯಡಿಯೂರಪ್ಪನವರು ಶಾಸಕರಾದ ಸಂದರ್ಭದಿಂದ ನಾವು ಕೆಲಸ ಮಾಡಿದ್ದೇನೆ. ಬಿಜೆಪಿಯ ಆಶೀರ್ವಾದ ನನ್ನ ಮೇಲಿದೆ. ನನಗೆ ಟಿಕೆಟ್ ನೀಡುವುದು ಎಲ್ಲ ನಾಯಕರ ತೀರ್ಮಾನವಾಗಿದ್ದು, ಕೇವಲ ಒಬ್ಬರು, ಇಬ್ಬರ ಹೆಸರು ಹೇಳೋದಕ್ಕೆ ಸಾಧ್ಯವಿಲ್ಲ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


