ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುವುದು ಹೈ ಕಮಾಂಡ್ ನಿರ್ಧಾರ: ಖರ್ಗೆ
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಕಾಂಗ್ರೆಸ್ ಉತ್ತಮ ನಿಲುವು ತಾಳಲಿದೆ. ಮುಂದಿನ ಮುಖ್ಯಮಂತ್ರಿ ಆಯ್ಕೆಯನ್ನು ಹೈಕಮಾಂಡ್ ಮಾಡಲಿದೆ ಎಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಮುಂದಿನ ಮುಖ್ಯಮಂತ್ರಿ ಆಯ್ಕೆಯನ್ನು ಹೈಕಮಾಂಡ್ ಮಾಡಲಿದೆ ಎಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಸಿದ್ದರಾಮಯ್ಯ ಅವರೇ ಸ್ವಯಂಚಾಲಿತವಾಗಿ ಆಯ್ಕೆ ಆಗುವುದಿಲ್ಲ. ಹೊಸದಾಗಿ ಆಯ್ಕೆಯಾದ ಶಾಸಕರೊಂದಿಗೆ ಹೈಕಮಾಂಡ್ ಸಮಾಲೋಚನೆ ನಡೆಸಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುತ್ತದೆ. ಸಿದ್ದರಾಮಯ್ಯ ನಾಯಕತ್ವದಲ್ಲಿ ಚುನಾವಣೆ ಎದುರಿಸಲಾಗುತ್ತದೆ. ಆದರೆ, ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತಡೆ ಹಿಡಿಯಲಾಗುತ್ತದೆ ಎಂದರು.
ಒಂದು ವೇಳೆ ನೀವೇ ಮುಂದಿನ ಮುಖ್ಯಮಂತ್ರಿ ಎಂದು ಹೈಕಮಾಂಡ್ ನಿರ್ಧರಿಸಿದ್ದರೆ ಏನೂ ಹೇಳುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖರ್ಗೆ, ಚುನಾವಣೆ ಸಂದರ್ಭದಲ್ಲಿ ಅನಗತ್ಯವಾಗಿ ವಿವಾದ ಸೃಷ್ಠಿ ಮಾಡಬೇಡಿ ಎಂದರು.
ಸಿದ್ದರಾಮಯ್ಯ ನಾಯಕತ್ವದಲ್ಲಿಯೇ ಕಾಂಗ್ರೆಸ್ ಪ್ರಚಾರ ನಡೆದಿದ್ದು, ಅವರೇ ನಾಯಕ. ಆದರೆ. ಹೈಕಮಾಂಡ್ ಬಯಸಿದ್ದರೆ ಯಾರನ್ನೂ ಬೇಕಾದರೂ ಬದಲಾಯಿಸಬಹುದು , ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ .ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಉತ್ತಮ ಅವಕಾಶವಿದ್ದು, ಮತ್ತೆ ಬಹುಮತ ಪಡೆಯುವ ವಿಶ್ವಾಸವಿದೆಎಂದು ತಿಳಿಸಿದರು.
ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಿದ ಬಗ್ಗೆ ಸಮರ್ಥಿಸಿಕೊಂಡ ಖರ್ಗೆ,ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿರಲಿಲ್ಲವೇ , ಬಾದಾಮಿ ಕ್ಷೇತ್ರದ ಜನತೆ ಬಯಸಿದ್ದರೆ ಸಿದ್ದರಾಮಯ್ಯ ಅಲ್ಲಿಯೂ ಸ್ಪರ್ಧಿಸುತ್ತಿದ್ದಾರೆ ಎಂದು ಖರ್ಗೆ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


