ರಾಜಕೀಯ

ಮಂಡ್ಯದಲ್ಲಿ ಅಂಬಿ ಬದಲು ಕಾಂಗ್ರೆಸ್ ಅಭ್ಯರ್ಥಿಯಾಗಿ ರವಿ ಗಾಣಿಗ ನಾಮಪತ್ರ

ಮಾಜಿ ಸಚಿವ ರೆಬಲ್​ ಸ್ಟಾರ್​ ಅಂಬರೀಶ್​ ಅವರ ಮೊಂಡಾಟಕ್ಕೆ ಹೈರಾಣಾಗಿದ್ದ ಕಾಂಗ್ರೆಸ್​ ಕೊನೆಗೂ ಮಂಡ್ಯ ಟಿಕೆಟ್​ ಅನ್ನು....

ಮಂಡ್ಯದಲ್ಲಿ ಅಂಬಿ ಬದಲು ಕಾಂಗ್ರೆಸ್ ಅಭ್ಯರ್ಥಿಯಾಗಿ ರವಿ ಗಾಣಿಗ ನಾಮಪತ್ರ
ಸಾಂದರ್ಭಿಕ ಚಿತ್ರ
Published On :
ಮಂಡ್ಯ: ಮಾಜಿ ಸಚಿವ ರೆಬಲ್​ ಸ್ಟಾರ್​ ಅಂಬರೀಶ್​ ಅವರ ಮೊಂಡಾಟಕ್ಕೆ ಹೈರಾಣಾಗಿದ್ದ ಕಾಂಗ್ರೆಸ್​ ಕೊನೆಗೂ ಮಂಡ್ಯ ಟಿಕೆಟ್​ ಅನ್ನು ಪ್ರಬಲ ಆಕಾಂಕ್ಷಿಯಾಗಿದ್ದ ರವಿಕುಮಾರ್ ಗೌಡ ಗಾಣಿಗ ಅವರಿಗೆ ನೀಡಿದೆ.
ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಮಂಡ್ಯ ಕ್ಷೇತ್ರದಲ್ಲಿ ಅಂಬರೀಶ್ ಸ್ಪರ್ಧಿಸಲು ನಿರಾಕರಿಸಿದ ಕಾರಣ ಕೊನೆ ಕ್ಷಣದಲ್ಲಿ ರವಿ ಗಾಣಿಗ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಅಂಬರೀಶ್ ತಾವು ನಿಲ್ಲದಿದ್ದರೆ ನನಗೆ ಟಿಕೆಟ್​ ಕೊಡಿಸುತ್ತಾರೆ ಎಂದು ನಂಬಿಕೊಂಡಿದ್ದ ಅವರ ಆಪ್ತ ಅಮರಾವತಿ ಚಂದ್ರಶೇಖರ್​ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಂಬರೀಶ್‌ ಸ್ಪರ್ಧೆ ಮಾಡದಿದ್ದರೆ ತಮಗೇ ಟಿಕೆಟ್‌ ಕೊಡಿ ಎಂದು ಅಮರಾವತಿ ಚಂದ್ರಶೇಖರ್‌ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಅವರನ್ನು ಭೇಟಿ ಮಾಡಿ ಮನವಿ ಮಾಡಿ, ಅಂಬರೀಶ್‌ ತಮಗೆ ಅವಕಾಶ ಕೊಡಿಸುವುದಾಗಿ ಹೇಳಿದ್ದಾರೆ ಎಂದು ಹೇಳಿದರು. ಇದರಿಂದ ಆಕ್ರೋಶಗೊಂಡಿರುವ ಅಂಬರೀಶ್‌ ತಾವು ಯಾರಿಗೂ ಟಿಕೆಟ್‌ ಕೊಡಿಸುವ ಭರವಸೆ ನೀಡಿಲ್ಲ ಎಂದು ಖಾರವಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.