ರಾಜಕೀಯ

ವಿಧಾನಸಭೆ ಚುನಾವಣೆ: ಜೆಡಿಎಸ್-ಬಿಎಸ್ಪಿ ಮೈತ್ರಿಯಲ್ಲಿ ಬಿರುಕು?

ನಾಮಪತ್ರ ಸಲ್ಲಿಕೆಯ ಅಂತಿಮ ದಿನವಾದ ನಿನ್ನೆ ಗುಲ್ಬರ್ಗಾ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ...

ವಿಧಾನಸಭೆ ಚುನಾವಣೆ: ಜೆಡಿಎಸ್-ಬಿಎಸ್ಪಿ ಮೈತ್ರಿಯಲ್ಲಿ ಬಿರುಕು?
ಗುಲ್ಬರ್ಗಾ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಲು ಎತ್ತಿನ ಗಾಡಿಯಲ್ಲಿ ಮೆರವಣಿಗೆ ಮೂಲಕ ಬಂದ ಜೆಡಿಎಸ್ ನ ಬಸವರಾಜ್ ಡಿಗ್ಗಾವಿ
Published On :

ಕಲಬುರಗಿ: ನಾಮಪತ್ರ ಸಲ್ಲಿಕೆಯ ಅಂತಿಮ ದಿನವಾದ ನಿನ್ನೆ ಗುಲ್ಬರ್ಗಾ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಎಸ್ ಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಜೆಡಿಎಸ್ ಮತ್ತು ಬಿಎಸ್ ಪಿ ನಡುವಿನ ಅಪವಿತ್ರ ಮೈತ್ರಿಯ ಬಗ್ಗೆ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ.

ಜೆಡಿಎಸ್ ಅಭ್ಯರ್ಥಿ ಬಸವರಾಜ್ ಡಿಗ್ಗಾವಿ ಮತ್ತು ಬಿಎಸ್ ಪಿ ಅಭ್ಯರ್ಥಿ ಸೂರ್ಯಕಾಂತ್ ನಿಂಬಾಳ್ಕರ್ ನಿನ್ನೆ ನಾಮಪತ್ರ ಸಲ್ಲಿಸಿದರು. ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ್ ತಡ್ಕಲ್ ಅವರು ಬಸವರಾಜ್ ಡಿಗ್ಗಾವಿನ್ ಅವರೊಡಗೂಡಿ ಬಂದು ಉಮೇದುವಾರಿಕೆ ಸಲ್ಲಿಸಿದರೆ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಗುರುಶಾಂತ್ ಪಟ್ಟೆದಾರ್ ಅವರು ಬಿಎಸ್ ಪಿ ಅಭ್ಯರ್ಥಿ ಸೂರ್ಯಕಾಂತ್ ನಿಂಬಾಳ್ಕರ್ ಅವರ ಜೊತೆಗೂಡಿ ಬಂದು ನಾಮಪತ್ರ ಸಲ್ಲಿಸಿದರು.

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಎಸ್ ಪಿ ರಾಜ್ಯ ಮಟ್ಟದಲ್ಲಿ ಮೈತ್ರಿ ಮಾಡಿಕೊಂಡಿವೆ. ಮೈತ್ರಿ ಒಪ್ಪಂದದಲ್ಲಿ ಗುಲ್ಬರ್ಗಾ ಗ್ರಾಮೀಣ ಮತ್ತು ಚಿತ್ತಾಪುರ ಕ್ಷೇತ್ರಗಳನ್ನು ಬಿಎಸ್ ಪಿಗೆ ಹಾಗೂ ಉಳಿದ ಏಳು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸುವುದು ಎಂದು ಒಪ್ಪಂದ ಮಾಡಿಕೊಳ್ಳಲಾಗಿದೆ.

ಹಠಾತ್ ಬೆಳವಣಿಗೆ: ಕಳೆದ ಶನಿವಾರದವರೆಗೆ ಎಲ್ಲವೂ ಸರಿಯಾಗಿತ್ತು. ಶನಿವಾರ ಸಾಯಂಕಾಲ ವೇಳೆಗೆ ಬಿಎಸ್ ಪಿಯ ಕಲಬುರಗಿ ಜಿಲ್ಲಾಧ್ಯಕ್ಷ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಸಚಿವ ರೇವು ನಾಯಕ್ ಬೆಳಮಗಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಗುಲ್ಬರ್ಗಾ ಗ್ರಾಮೀಣ ಪ್ರದೇಶದಿಂದ ಸ್ಪರ್ಧಿಸಲು ಬಿ-ಫಾರಂ ನೀಡುವ ಮೂಲಕ ಆಘಾತ ನೀಡಿತ್ತು. ಆರಂಭದಲ್ಲಿ ಮೈತ್ರಿ ವೇಳೆ ಗುಲ್ಬರ್ಗಾ ಗ್ರಾಮೀಣ ಕ್ಷೇತ್ರವನ್ನು ಬಿಎಸ್ ಪಿಗೆ ನೀಡಲಾಗಿತ್ತು.

ಜೆಡಿಎಸ್ ಮತ್ತು ಬಿಎಸ್ ಪಿ ಮೈತ್ರಿ ಮಾಡಿಕೊಂಡ ನಂತರ ಕಲಬುರಗಿ ಬಿಎಸ್ಪಿ ಜಿಲ್ಲಾಧ್ಯಕ್ಷ ಸೂರ್ಯಕಾಂತ್ ನಿಂಬಾಳ್ಕರ್ ಪ್ರಚಾರಕಾರ್ಯ ಆರಂಭಿಸಿದ್ದರು. ಅಲ್ಲದೆ ಗುಲ್ಬರ್ಗಾ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದವಾಗಿದ್ದರು ಕೂಡ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.