ಮಂಗಳೂರು: ರಾಹುಲ್ ಗಾಂಧಿ ಭೇಟಿ; ಕಾಂಗ್ರೆಸ್ ಗೆ ಬೆಂಬಲ ನೀಡಲು ವಿಜಯ್ ಕುಮಾರ್ ಶೆಟ್ಟಿ ನಿರ್ಧಾರ
ನೇತ್ರಾವತಿ ರಕ್ಷಣಾ ಸಮಿತಿ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ ಕಾಂಗ್ರೆಸ್ ಬೆಂಬಲ ನೀಡಲು ನಿರ್ಧರಿದ್ದು, ಪಕ್ಷದ ಪ್ರಚಾರ ನಡೆಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Published On :
ಮಂಗಳೂರು: ನೇತ್ರಾವತಿ ರಕ್ಷಣಾ ಸಮಿತಿ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ ಕಾಂಗ್ರೆಸ್ ಗೆ ಬೆಂಬಲ ನೀಡಲು ನಿರ್ಧರಿದ್ದು, ಪಕ್ಷದ ಪ್ರಚಾರ ನಡೆಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಎತ್ತಿನಹೊಳೆ ನದಿ ತಿರುವು ಯೋಜನೆ ಸಂಬಂಧ ವಿಜಯ್ ಕುಮಾರ್ ಶೆಟ್ಟಿ ಪ್ರಮುಖ ಹೋರಾಟಗಾರರಾಗಿದ್ದು, ಈ ಹಿಂದೆ ಇದೇ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಶಾಸಕರು ಕೂಡ ಆಗಿದ್ದರು. ಇದೀಗ ಮತ್ತೆ ಮಂಗಳೂರಿನಲ್ಲಿ ವಿಜಯ್ ಕುಮಾರ್ ಶೆಟ್ಟಿ ಕಾಂಗ್ರೆಸ್ ಬೆನ್ನಿಗೆ ನಿಲ್ಲಲು ನಿರ್ಧರಿಸಿದ್ದು, ಪಕ್ಷದ ಅಭ್ಯರ್ಥಿಗಳ ಪ್ರಚಾರ ನಡೆಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಇನ್ನು ವಿಜಯ್ ಕುಮಾರ್ ಶೆಟ್ಟಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಬಳಿಕ ಈ ನಿರ್ಧಾರಕ್ಕೆ ಬಂದಿದ್ದು, ವಿಜಯ್ ಕುಮಾರ್ ಶೆಟ್ಟಿ ಅವರೊಂದಿಗೆ ರಾಹುಲ್ ಗಾಂಧಿ ಸುಧೀರ್ಘ ಚರ್ಚೆ ನಡೆಸಿದರು ಎನ್ನಲಾಗಿದೆ. ಈ ವೇಳೆ ವಿಜಯ್ ಕುಮಾರ್ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಎಂಎಲ್ ಸಿ ಟಿಕೆಟ್ ನೀಡುವುದಾಗಿಯೂ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ ಎನ್ನಲಾಗಿದ್ದು, ಇದೇ ಕಾರಣಕ್ಕೆ ವಿಜಯ್ ಕುಮಾರ್ ಶೆಟ್ಟಿ ಕಾಂಗ್ರೆಸ್ ಅಭ್ಯರ್ಥಿಗಳ ಬೆಂಬಲಿಸುವ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಮೂಲಗಳ ಪ್ರಕಾರ ಮಂಗಳೂರು ಉತ್ತರ ಕ್ಷೇತ್ರದಲ್ಲಿ ವಿಜಯ್ ಕುಮಾರ್ ಶೆಟ್ಟಿ ಮತ್ತು ಅವರ ಬೆಂಬಲಿಗರು ಕಾಂಗ್ರೆಸ್ ಪಕ್ಷದ ಪರ ಪ್ರಚಾರ ನಡೆಸಲಿದ್ದಾರೆ.
ಇನ್ನು ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯ್ ಕುಮಾರ್ ಶೆಟ್ಟಿ, ಸಿಎಂ ಸಿದ್ದರಾಮಯ್ಯ ಅವರನ್ನು ಕೊಂಡಾಡಿದರು. ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ಹೇಳಿದರು. ಇದೇ ವೇಳೆ 2008ರಲ್ಲಿ ತಮಗೆ ಎಂಎಲ್ ಸಿ ಟಿಕೆಟ್ ನಿರಾಕರಿಸಿದ ಪ್ರಸಂಗವನ್ನು ನೆನಪಿಸಿಕೊಂಡ ವಿಜಯ್ ಕುಮಾರ್ ಶೆಟ್ಟಿ, 2013ರ ವಿಧಾನಸಭಾ ಚುನಾವಣೆಯಿಂದಾಗಿ ನನಗೆ ಎಂಎಲ್ ಸಿ ಟಿಕೆಟ್ ನಿರಾಕರಿಸಲಾಗಿತ್ತು. ಆದರೆ ಅಂದು ರಾಜ್ಯ ಸಭಾ ಸದಸ್ಯರಾಗಿದ್ದ ಎಕೆ ಆ್ಯಂಟನಿ ಎಂಎಲ್ ಸಿ ಟಿಕೆಟ್ ನೀಡುವ ಭರವಸೆ ನೀಡಿದ್ದರು. ಆದರೆ ಅವರು ಮಾತು ಉಳಿಸಿಕೊಳ್ಳಲಿಲ್ಲ ಎಂದು ಹೇಳಿದರು.
ಅಂತೆಯೇ ಈ ಹಿಂದೆ ರಾಹುಲ್ ಗಾಂಧಿ ಮಂಗಳೂರಿಗೆ ಭೇಟಿ ನೀಡಿದ್ದಾಗ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದ್ದೆವು. ಅದರೆ ಅನುಮತಿ ಸಿಕ್ಕಿರಲಿಲ್ಲ. ಈ ಬಾರಿ ಖಂಡಿತ ರಾಹುಲ್ ಗಾಂಧಿ ಅವರನ್ನು ಬೆಂಬಲಿಗರೊಂದಿಗೆ ಭೇಟಿ ಮಾಡುತ್ತೇವೆ. ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಮತ್ತು ವಿಶುನಾಥ್ ಅವರು ಈ ಬಗ್ಗೆ ಭರವಸೆ ನೀಡಿದ್ದಾರೆ. ಈ ವೇಳೆ ನನ್ನ ಮನವಿಯನ್ನು ಅವರಿಗೆ ತಲುಪಿಸುತ್ತೇನೆ ಎಂದು ಹೇಳಿದರು. ಅಂತೆಯೇ ಬಿಜೆಪಿ ಸೇರುವ ಊಹಾಪೋಹಗಳನ್ನು ಅವರು ತಳ್ಳಿ ಹಾಕಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
MANGALURUಮಂಗಳೂರುPoliticsSiddaramaiahಸಿದ್ದರಾಮಯ್ಯRahul Gandhiರಾಹುಲ್ ಗಾಂಧಿವಿಜಯ್ ಕುಮಾರ್Karnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆVijay Kumar Shetty
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


