ಯೋಗಿ ಆದಿತ್ಯನಾಥ್ ಬಿಜೆಪಿಗೆ ಮೈನಸ್ ಪಾಯಿಂಟ್: ಸಿಎಂ ಸಿದ್ದರಾಮಯ್ಯ
ಒಂದು ವೇಳೆ ಯೋಗಿ ಆದಿತ್ಯನಾಥ್ ಇಲ್ಲಿಗೆ ಬಂದರೇ ಅದು ಬಿಜೆಪಿಗೆ ಮೈನಸ್ ಪಾಯಿಂಟ್, ಉತ್ತರ ಪ್ರದೇಶದಲ್ಲಿ ಅವರು ಏನು ಮಾಡಿದ್ದಾರೆ...

Published On :
ಮಂಗಳೂರು: ಮೇ 12 ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು, ಬಿಜೆಪಿ ಪರ ಪ್ರಚಾರ ಮಾಡಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕರ್ನಾಟಕಕ್ಕೆ ಬರಲಿದ್ದಾರೆ, ಆದರೆ ಇದರಿಂದ ಬಿಜೆಪಿ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಒಂದು ವೇಳೆ ಯೋಗಿ ಆದಿತ್ಯನಾಥ್ ಇಲ್ಲಿಗೆ ಬಂದರೇ ಅದು ಬಿಜೆಪಿಗೆ ಮೈನಸ್ ಪಾಯಿಂಟ್, ಉತ್ತರ ಪ್ರದೇಶದಲ್ಲಿ ಅವರು ಏನು ಮಾಡಿದ್ದಾರೆ, ಯೋಗಿ ಆದಿತ್ಯನಾಥ್ ತಮ್ಮ ಸ್ವಕ್ಷೇತ್ರದಲ್ಲಿಯೇ ತಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಟೀಕಿಸಿದ್ದಾರೆ.ಅಲ್ಲಿ ಗೆಲ್ಲು ಸಾಧ್ಯವಾಗದ ಮೇಲೆ ಇಲ್ಲಿ ಬಂದು ಏನು ಮಾಡುತ್ತಾರೆ, ಇಲ್ಲಿ ಏನು ಮಾಡಲಾಗದು ಎಂದು ತಿಳಿಸಿದ್ದಾರೆ.
ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಪ್ರಚಾರ ಮಾಡಲು ಬರುವ ಯೋಗಿ ಸುಮಾರು 35 ರ್ಯಾಲಿಗಳಲ್ಲಿ ಭಾಗವವಹಿಸುತ್ತಾರೆ ಎಂಬ ಹೇಳಿಕೆಗೆ ಸಿಎಂ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಯೋಗಿ ಆದಿತ್ಯನಾಥ್ ಪ್ರಚಾರ ನಡೆಸಲಿದ್ದಾರೆ ಎಂದು ಕರ್ನಾಟಕ ಬಿಜೆಪಿ ಮುಖಂಡರು ತಿಳಿಸಿದ್ದಾರೆ. ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಡಮ್ಮಿ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯYogi Adityanathಯೋಗಿ ಆದಿತ್ಯನಾಥ್Karnataka Assembly Electionಕರ್ನಾಟಕ ವಿಧಾನ ಸಭೆ ಚುನಾವಣೆMinus pointಮೈನಸ್ ಪಾಯಿಂಟ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


