ವಿಶ್ವವೇ ಭಾರತದತ್ತ ನೋಡುತ್ತಿದ್ದರೆ, ಭಾರತ, ಬೆಂಗಳೂರಿನತ್ತ ನೋಡುತ್ತಿದೆ- ಸ್ಯಾಮ್ ಪಿತ್ರೋಡಾ
ನವೀನ ರೀತಿಯ ಪರಿಹಾರಕ್ಕಾಗಿ ವಿಶ್ವವೇ ಭಾರತದತ್ತ ನೋಡುತ್ತಿದ್ದರೆ, ಇಡೀ ಭಾರತವೇ ಬೆಂಗಳೂರಿನತ್ತ ನೋಡುತ್ತಿದೆ ಎಂದು ಪ್ರಧಾನಮಂತ್ರಿಗಳ ಮಾಜಿ ಸಲಹೆಗಾರ ಸ್ಯಾಮ್ ಪ್ರಿತೋಡಾ ಹೇಳಿದ್ದಾರೆ.

ಬೆಂಗಳೂರು: ನವೀನ ರೀತಿಯ ಪರಿಹಾರಕ್ಕಾಗಿ ವಿಶ್ವವೇ ಭಾರತದತ್ತ ನೋಡುತ್ತಿದ್ದರೆ, ಇಡೀ ಭಾರತವೇ ಬೆಂಗಳೂರಿನತ್ತ ನೋಡುತ್ತಿದೆ ಎಂದು ಪ್ರಧಾನಮಂತ್ರಿಗಳ ಮಾಜಿ ಸಲಹೆಗಾರ ಸ್ಯಾಮ್ ಪ್ರಿತೋಡಾ ಹೇಳಿದ್ದಾರೆ.
ಜ್ಞಾನಜ್ಯೋತಿ ಸಭಾಂಗಣದಲ್ಲಿಂದು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಯಲ್ಲಿನ ಪ್ರಮುಖ ಅಂಶಗಳ ಕುರಿತು ಮಾತನಾಡಿದ ಅವರು, ಪ್ರಗತಿಶೀಲ ನೀತಿಗಳ ಪರಿಸರ ವ್ಯವಸ್ಥೆ, ಕ್ರಿಯಾತ್ಮಕ ಬೆಳವಣಿಗೆ ಮತ್ತು ದೃಷ್ಟಿ ಕಾಂಗ್ರೆಸ್ ಪಕ್ಷದಿಂದ ಮಾತ್ರ ವರ್ಧಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ವಿಶಾಲ ತಳಹದಿಯೇ ಮೇಲೆ ಪಕ್ಷದ ಪ್ರಣಾಳಿಕೆ ರೂಪಿತಗೊಂಡಿದ್ದು, ಇದು ಜನರ ಧ್ವನಿಯಾಗಿದೆ. ರೈತರ ಆದಾಯ ದ್ವಿಗುಣ, ಮಕ್ಕಳಿಗೆ ಉಚಿತ ಶಿಕ್ಷಣ, ಐದು ವರ್ಷದಲ್ಲಿ 1 ಕೋಟಿ ಉದ್ಯೋಗ ಸೃಷ್ಟಿ ಇವೆಲ್ಲಾವೂ ಜನರ ಧ್ವನಿಯನ್ನು ಪ್ರತಿಬಿಂಬಿಸಲಿವೆ ಎಂದು ಹೇಳಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ಕಾಂಗ್ರೆಸ್ ನೊಂದಿಗೆ ಪ್ರಗತಿ ಕೇವಲ ಭರವಸೆಯಲ್ಲ ಅದು ರಾಜ್ಯದ ಜನರ ಮೇಲಿನ ಬದ್ಧತೆಯಾಗಿದೆ . ಎಲ್ಲ ಭರವಸೆಗಳನ್ನು ಈಡೇರಿಸಿ ನವ ಕರ್ನಾಟಕ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ. ಜೆ ಜಾರ್ಜ್ ಮಾತನಾಡಿ, ಗಂಭೀರವಾಗಿ ಪ್ರಣಾಳಿಕೆ ರೂಪಿಸಲಾಗಿದ್ದು, ಪ್ರತಿಯೊಂದು ಭರವಸೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಈಡೇರಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


