ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆಪ್ ಪರ ಪ್ರಚಾರಕ್ಕೆ
ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಈ ಸಾಲಿನ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಆಪ್) ಪರ ಪ್ರಚಾರಕ್ಕಿಳಿದಿದ್ದಾರೆ.

Published On :
ಬೆಂಗಳೂರು: ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಈ ಸಾಲಿನ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಆಪ್) ಪರ ಪ್ರಚಾರಕ್ಕಿಳಿದಿದ್ದಾರೆ.
ಆಪ್ ಅಭ್ಯರ್ಥಿಗಳ ಪರ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿರುವ ಸಂತೋಷ್ ಹೆಗ್ಡೆ ಸರ್ವಜ್ಞನಗರ, ಕಲ್ಯಾಣನಗರ, ಎಚ್‌ಆರ್‌ಬಿಆರ್ ಬಡಾವಣೆ ಸೇರಿ ಅನೇಕ ಕಡೆ ಪ್ರಚಾರದಲ್ಲಿ ತೊಡಗಿದ್ದಾರೆ.
ಭ್ರಷ್ಠಾಚಾರದ ವಿರುದ್ಧ ಸತತ ಹೋರಾಡುತ್ತಾ ಬಂದಿರುವ ಸಂತೋಷ್ ಹೆಗ್ಡೆ ಆಪ್ ಪರ ಪ್ರಚಾರ ಕೈಗೊಂಡಿರುವುದು ಆ ಪಕ್ಷದ ಅಭ್ಯರ್ಥಿಗಳಲ್ಲಿ ನೈತಿಕ ಬಲ ತುಂಬಿದೆ.
ತಮ್ಮ ಅಧಿಕಾವಧುಇಯಲ್ಲಿ ಭ್ರಷ್ಠ ಅಧಿಕಾರಿಗಳಿಗೆ ಸಿಂಹಸ್ವಪ್ನವಾಗಿದ್ದ ನ್ಯಾಯಮೂರ್ತಿಗಳು ಈಗಲೂ ಸಹ ಅನೇಕ ಸಮಾಜ ಕಲ್ಯಆಣ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಕರ್ನಾಟಕವನ್ನು ಭ್ರಷ್ಠಾಚಾರ ಮುಕ್ತಗೊಳಿಸಬೇಕು ಎನ್ನುವ ಮಹೋದ್ದೇಶದೊಡನೆ ಅವರು ಈ ಬಾರಿ ಚುನಾವಣೆ ಪ್ರಚಾರ ಕಾರ್ಯಕ್ಕೆ ತೊಡಗಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು 28 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ.ಇದರಲ್ಲಿ ಬೆಂಗಳೂರು ಮಹಾನಗರದ 11 ಕ್ಷೇತ್ರಗಳು ಸೇರಿದ್ದು ಇಲ್ಲೆಲ್ಲಾ ಸಂತೋಷ್ ಹೆಗ್ಡೆ ಪ್ರಚಾರ ಕೈಗೊಳ್ಳಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
AAPಎಎಪಿSanthosh Hegdeಸಂತೋಷ್ ಹೆಗ್ಡೆಮಾಜಿ ಲೋಕಾಯುಕ್ತ ನ್ಯಾಯಮೂರ್ತಿKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆFormar Lokayukta Justice
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


