ರಾಜಕೀಯ

ಪ್ರತೀ ಕಾರ್ಯಕರ್ತರ ಮನೆ ಮೇಲೆ ಬಿಜೆಪಿ ಧ್ವಜ ಹಾರಾಡಬೇಕು: ಅಮಿತ್ ಶಾ ವಾರ್ನಿಂಗ್

ರಾಜ್ಯ ವಿಧಾನಸಭಾ ಚುನಾವಣೆ ನಿಮಿತ್ತ ಕರ್ನಾಟಕದಲ್ಲಿ ಉಳಿದುಕೊಂಡು ಭರ್ಜರಿ ಪ್ರಚಾರ ಮಾಡುತ್ತಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಕ್ಷದ ಕಾರ್ಯಕರ್ತರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಪ್ರತೀ ಕಾರ್ಯಕರ್ತರ ಮನೆ ಮೇಲೆ ಬಿಜೆಪಿ ಧ್ವಜ ಹಾರಾಡಬೇಕು: ಅಮಿತ್ ಶಾ ವಾರ್ನಿಂಗ್
ಸಂಗ್ರಹ ಚಿತ್ರ
Published On :
ಕೊಪ್ಪಳ: ರಾಜ್ಯ ವಿಧಾನಸಭಾ ಚುನಾವಣೆ ನಿಮಿತ್ತ ಕರ್ನಾಟಕದಲ್ಲಿ ಉಳಿದುಕೊಂಡು ಭರ್ಜರಿ ಪ್ರಚಾರ ಮಾಡುತ್ತಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಕ್ಷದ ಕಾರ್ಯಕರ್ತರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಪ್ರಸ್ತುತ ಕೊಪ್ಪಳ ಜಿಲ್ಲಾ ಪ್ರವಾಸದಲ್ಲಿರುವ ಅಮಿತ್ ಶಾ ನಿನ್ನೆ ಶಿವಾ ಚಿತ್ರಮಂದಿರದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಕಾರ್ಯಕರ್ತರ ಮತ್ತು ನಾಯಕರ ಸಂಘಟನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಈ ವೇಳೆ ಪಕ್ಷದ ಭದ್ರ ಬುನಾದಿ ಇರುವುದೇ ಬೂತ್ ಮಟ್ಟದಲ್ಲಿ. ಸಭೆ ಸಮಾರಂಭಗಳನ್ನು ಮಾಡಿದ ಮಾತ್ರಕ್ಕೆ ಪಕ್ಷ ಬಲಿಷ್ಟವಾಗುತ್ತದೆ ಎಂಬ ಅಭಿಪ್ರಾಯ ತಪ್ಪು. ಜಿಲ್ಲೆಯ ಪ್ರತೀ ಗ್ರಾಮಗಳಲ್ಲೂ ಬೈಕ್ ರ್ಯಾಲಿ ಮಾಡಿ, ಅಂತೆಯೇ ಗ್ರಾಮದ ಪ್ರತೀ ಬಿಜೆಪಿ ಕಾರ್ಯಕರ್ತನ ಮನೆ ಮೇಲೆ ಬಿಜೆಪಿ ಪಕ್ಷದ ಧ್ವಜ ಹಾರಿಸಿ..ಇದು ಮುಂದಿನ ವರ್ಷದವರೆಗೂ ಹಾಗೆಯೇ ಇರಬೇಕು ಎಂದು ಹೇಳಿದರು.
ಇದೇ ಮಾದರಿಯಲ್ಲಿ ಐದು ಸಲ ಗುಜರಾತ್ ಚುನಾವಣೆ ಗೆದ್ದು, ಇಲ್ಲೂ ಕೂಡ ಇದೇ ರೀತಿಯ ಕೆಲಸಗಳಾಗಬೇಕು. ಇದಕ್ಕಾಗಿ ಇಂದಿನಿಂದಲೇ ಕಾರ್ಯಪ್ರವೃತ್ತರಾಗಿ ಎಂದು ಶಾ ಸಲಹೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.