ರಾಜಕೀಯ

ಖಾನಾಪುರ: ಜೆಡಿಎಸ್ ಅಭ್ಯರ್ಥಿ ನಾಸಿರ್ ಭಾಗವಾನ್ ಮನೆ ಮೇಲೆ ಐಟಿ ದಾಳಿ

ಖಾನಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಸಿರ್ ಬಾಗವಾನ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ.....

ಖಾನಾಪುರ: ಜೆಡಿಎಸ್ ಅಭ್ಯರ್ಥಿ ನಾಸಿರ್ ಭಾಗವಾನ್ ಮನೆ ಮೇಲೆ ಐಟಿ ದಾಳಿ
ನಾಸಿರ್ ಭಾಗವಾನ್
Published On :
ಬೆಳಗಾವಿ:  ಮೇ 12 ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ಬಿರುಸಿನ ಪ್ರಚಾರ ಕ್ರಮ ಕೈಗೊಂಡಿವೆ, ಇದೇ ವೇಳೆ ಖಾನಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಸಿರ್ ಬಾಗವಾನ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ.
ಜಿಲ್ಲೆಯ ಖಾನಾಪುರ ತಾಲ್ಲೂಕಿನ ಗಂದಿಗವಾಡ ಗ್ರಾಮದಲ್ಲಿರುವ ನಿವಾಸದ ಮೇಲೆ 11 ಅಧಿಕಾರಿಗಳ ತಂಡ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ನಾಮಪತ್ರದೊಂದಿಗೆ ಅವರು ಸಲ್ಲಿಸಿದ್ದ ಆಸ್ತಿ ವಿವರದಲ್ಲಿ,‌ ತಮ್ಮ ಬಳಿ ರು.191  ಕೋಟಿ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಐಟಿ ಶಾಕ್ ನೀಡಿದೆ.
ಬಾಗವಾನ್ ಅವರ ಹುಬ್ಬಳ್ಳಿ ವಿದ್ಯಾನಗರ ನಿವಾಸ ಮತ್ತು ಅರವಿಂದ ನಗರ ಕಚೇರಿ ಮೇಲೂ ಗೋವಾ ರಾಜ್ಯದ ಐಟಿ ಅಧಿಕಾರಿಗಳ 15 ಜನ ತಂಡದ ದಾಳಿ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೂರು ವಾಹನಗಳಲ್ಲಿ ಬಂದಿರುವ ಅಧಿಕಾರಿಗಳು, ಮನೆಯಲ್ಲಿ ನಾಸೀರ್ ಬಾಗವಾನ್‌, ಪುತ್ರ ರಮೀಸ್ ಮತ್ತು ರಯೀಸ್ ಭಾಗವಾನ್ ಅವರ ವಿಚಾರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.