ಕೇಂದ್ರ ಕೊಟ್ಟ ಅನುದಾನ ಎಲ್ಲಿ ಹೋಯ್ತು, ಸಿಎಂ ಲೆಕ್ಕ ಕೊಡಲಿ: ಅಮಿತ್ ಶಾ
ಐದು ವರ್ಷ ಆಡಳಿತ ನಡೆಸಿದ ಸಿಎಂ ಸಿದ್ದರಾಮಯ್ಯ ಲೆಕ್ಕಕೊಡಬೇಕು' ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

Published On :
ಕೊಪ್ಪಳ: ಐದು ವರ್ಷ ಆಡಳಿತ ನಡೆಸಿದ ಸಿಎಂ ಸಿದ್ದರಾಮಯ್ಯ ಲೆಕ್ಕಕೊಡಬೇಕು' ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೊಪ್ಪಳದ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ಆಯೋಜಿಸಿದ್ದ 'ಚುನಾವಣಾ ಪ್ರಚಾರದ ಬಹಿರಂಗ ಸಮಾವೇಶ'ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ''ಕರ್ನಾಟಕದಲ್ಲಿ ಪ್ರವಾಸ ಮಾಡುತ್ತಿರುವ ರಾಹುಲ್ ಬಾಬಾ ಅವರು ಮಾತಿಗೊಮ್ಮೆ ಮೋದಿ ಅವರು ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ? ಎಂದು ಕೇಳುತ್ತಾರೆ. ಅವರಿಗೆ ನಾವು ಉತ್ತರ ಕೊಡಬೇಕಿಲ್ಲ. ಮುಂದಿನ ಲೋಕಸಭೆ ಚುನಾವಣೆ ಬಂದಾಗ ಕರ್ನಾಟಕಕ್ಕೆ ನಾವು ಏನು ಕೊಡುಗೆ ಕೊಟ್ಟಿದ್ದೇವೆ ಎನ್ನುವುದನ್ನು ಜನರ ಮುಂದೆ ಲೆಕ್ಕಸಹಿತ ವಿವರಿಸುತ್ತೇವೆ'' ಎಂದರು.
'ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದ ಅವಧಿಯಲ್ಲಿ 13ನೇ ಹಣಕಾಸು ಯೋಜನೆಯಡಿ ಕರ್ನಾಟಕಕ್ಕೆ 88ಸಾವಿರ ಕೋಟಿ ರೂ. ನೀಡಲಾಗಿತ್ತು. ಈಗಿನ ಬಿಜೆಪಿ ಸರಕಾರ 1ಲಕ್ಷ 19ಸಾವಿರ ಕೋಟಿ ರೂ. ಅನುದಾನ ನೀಡಿದೆ. ಆದರೆ ಈ ಹಣ ಜನರ ಅಭಿವೃದ್ಧಿಗೆ ಬಳಕೆಯಾಗಿಲ್ಲ. ಗಂಗಾವತಿ ನಗರ ಪವಿತ್ರ ಸ್ಥಳ, ಅಂಜನಿಪುತ್ರ ಹನುಮಾನ್ ಜನಿಸಿದ ಪುಣ್ಯಭೂಮಿ. ಇಂತಹ ನೆಲಕ್ಕೆ ಬಂದಿರುವುದು ನನ್ನ ಪುಣ್ಯ'' ಎಂದು ಹೇಳಿದರು. ತಮ್ಮ ಆಗಮನ ವಿಳಂಬವಾಗಿದ್ದಕ್ಕೆ ಕ್ಷಮೆ ಕೋರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯAmit Shahfundನಿಧಿಅಮಿತ್ ಶಾKarnataka Assembly Electionಕರ್ನಾಟಕ ವಿಧಾನಸ ಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


