ಸಿದ್ದರಾಮಯ್ಯ ಸರ್ಕಾರದ ಅಂತ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ- ಅಮಿತ್ ಶಾ
ಮೇ 12 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಸಿದ್ದರಾಮಯ್ಯ ಸರ್ಕಾರದ ಅಂತ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ ಎಂದು ಹೇಳಿದ್ದಾರೆ.

ಹುನಗುಂದ: ಮೇ 12 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಸಿದ್ದರಾಮಯ್ಯ ಸರ್ಕಾರದ ಅಂತ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ ಎಂದು ಹೇಳಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ವಿಧಾನಸಭಾ ಕ್ಷೇತ್ರದಲ್ಲಿಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಕಾಂಗ್ರೆಸ್ ಸರ್ಕಾರ 12 ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದ್ದು, ಇದೀಗ ಕರ್ನಾಟಕದ ಸರದಿ. ಸಿದ್ದರಾಮಯ್ಯ ಅವರನ್ನು ಅತಿಯಾದ ಬೇಡಿಕೆಯೊಂದಿಗೆ ಬದಾಮಿಯಿಂದಲೂ ಕಾಂಗ್ರೆಸ್ ನಿಲ್ಲಿಸಿದೆ. ಆದರೆ, ಅಲ್ಲಿಯೂ ಅವರು ಸೋಲುತ್ತಾರೆ ಎಂದು ಹೇಳಿದರು.
ರಾಜ್ಯದಾದ್ಯಂತ ಪ್ರವಾಸ ಮಾಡಿದ್ದು, ಎಲ್ಲೆಲ್ಲೂ ಬಿಜೆಪಿ ಪರ ಅಲೆ ಕಂಡುಬರುತ್ತಿದೆ. ಈ ಬಾರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಅವಕಾಶ ಮಾಡಿಕೊಟ್ಟರೆ, ಕರ್ನಾಟಕವನ್ನು ದೇಶದಲ್ಲಿಯೇ ನಂಬರ್ 1 ರಾಜ್ಯವನ್ನಾಗಿ ಮಾಡಲಾಗುವುದು ಎಂದು ಭರವಸೆ ನೀಡಿದರು.
ಎರಡು ದಿನಗಳ ಪ್ರವಾಸದಲ್ಲಿ ಅಮಿತ್ ಶಾ ಮೂರು ಕಡೆಗಳಲ್ಲಿ ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಇದಕ್ಕೂ ಮುನ್ನ ಅಮಿತ್ ಶಾ, ವಿಶ್ವಗುರು ಬಸವೇಶ್ವರರ ಐಕ್ಯಸ್ಥಳ ಕೂಡಲಸಂಗಮಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


