ಕೇಂದ್ರದಿಂದ ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ; ಗೃಹ ಸಚಿವ ರಾಮಲಿಂಗಾ ರೆಡ್ಡಿ
ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರ ಕಳೆದ ಮೂರು ತಿಂಗಳಿನಿಂದ ಕಾಂಗ್ರೆಸ್ ನಾಯಕರ ದೂರವಾಣಿ ಕರೆಗಳನ್ನು ಕದ್ದಾಲಿಸುತ್ತಿದೆ ಎಂದು ರಾಜ್ಯ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು ಶುಕ್ರವಾರ ಗಂಭೀರ ಆರೋಪ ಮಾಡಿದ್ದಾರೆ...

Published On :
ಬೆಂಗಳೂರು; ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರ ಕಳೆದ ಮೂರು ತಿಂಗಳಿನಿಂದ ಕಾಂಗ್ರೆಸ್ ನಾಯಕರ ದೂರವಾಣಿ ಕರೆಗಳನ್ನು ಕದ್ದಾಲಿಸುತ್ತಿದೆ ಎಂದು ರಾಜ್ಯ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು ಶುಕ್ರವಾರ ಗಂಭೀರ ಆರೋಪ ಮಾಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿರುವ ಅವರು, ಸಚಿವರು ಸೇರಿದಂದೆ 100ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರ ಫೋನ್ ಗಳ ಕದ್ದಾಲಿಕೆಯಾಗುತ್ತಿದೆ. ಈ ಬಗ್ಗೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದ್ದು, ಫೋನ್ ಕದ್ದಾಲಿಕೆ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿದ್ದೇವೆಂದು ಹೇಳಿದ್ದಾರೆ.
ನಮ್ಮ ಗುಪ್ತಚರ ದಳಗಳು ಹಾಗೂ ಮೂಲಗಳು ಈ ಬಗ್ಗೆ ಮಾಹಿತಿ ನೀಡಿದ್ದವು. ನಮ್ಮ ಫೋನ್ ಗಳನ್ನು ಕದ್ದಾಲಿಸಲಾಗುತ್ತಿದೆ ಎಂದು ತಿಳಿಸಿತ್ತು. ಪಕ್ಷದ ಚುನಾವಣಾ ತಂತ್ರಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಅವರು ಯತ್ನ ನಡೆಸುತ್ತಿದ್ದಾರೆ. ಆದರೆ, ಕನಿಷ್ಟ 60 ಕ್ಷೇತ್ರಗಳಲ್ಲಿಯೂ ಗೆಲವು ಸಾಧಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ತೆರಿಗೆ ಇಲಾಖೆಯ ಅಧಿಕಾರಿಗಳು ಪಕ್ಷದ ಕಾರ್ಯಕರ್ತರಿಗೆ ಬೆದರಿಕೆಗಳನ್ನು ಹಾಕುತ್ತಿದ್ದು, ಬಿಜೆಪಿಗಾಗಿ ಕಾರ್ಯನಿರ್ವಹಿಸಿ, ಕಾಂಗ್ರೆಸ್'ಗೆ ನೀಡಲಾಗುತ್ತಿರುವ ಬೆಂಬಲ ನಿಲ್ಲಿಸಿ ಎಂದು ಸೂಚಿಸುತ್ತಿದ್ದಾರೆ. ಐಟಿ ಇಲಾಖೆಯ ಅಧಿಕಾರಿಗಳಿಗೆ ಬಿಜೆಪಿ ಸದಸ್ಯತ್ವ ಸ್ಥಾನ ನೀಡಿದ್ದು, ಅವರ ತಾಳಕ್ಕೆ ತಕ್ಕಂತೆ ಕುಣಿಯುವಂತೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಸರ್ಕಾರದ ವಿರುದ್ಧ ಬಿಜೆಪಿ ತಪ್ಪು ತಪ್ಪು ಜಾಹೀರಾತುಗಳನ್ನು ನೀಡುವ ಮೂಲಕ ಪ್ರಚಾರ ಮಾಡುತ್ತಿದೆ. ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಬೆಂಗಳೂರು ನಗರವನ್ನು ಗಾರ್ಬೇಜ್ ಸಿಟಿ ಎಂದು ಕರೆಯಲಾಗುತ್ತಿತ್ತು. ಮಾಧ್ಯಮಗಳನ್ನು ಬಿಜೆಪಿ ದುರುಪಯೋಗಪಡಿಸಿಕೊಳ್ಳುತ್ತಿದೆ. ಕಾಂಗ್ರೆಸ್ ನಾಯಕರನ್ನು ಗುರಿ ಮಾಡಲಾಗುತ್ತಿದೆ. ಐಟಿ ದಾಳಿ ಮಾಡುತ್ತಿದ್ದೆ, ಕಾಂಗ್ರೆಸ್ ಜೊತೆಗೆ ಉತ್ತಮ ಸಂಬಂಧ ಇರುವ ಉದ್ಯಮಿಗಳನ್ನು ಗುರಿ ಮಾಡುತ್ತಿದೆ. ಬಿಜೆಪಿ ಬೆಂಬಲಿಸಬೇಕೆಂದು ಪರೋಕ್ಷವಾಗಿ ಬೆದರಿಕೆ ಹಾಕುತ್ತಿದೆ. ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ನಾವು ಬಹಿರಂಗಪಡಿಸುತ್ತೇವೆಂದು ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕರ ಫೋನ್ ಗಳನ್ನೇಕೆ ಕದ್ದಾಲಿಸಲಾಗುತ್ತಿದೆ...? ಐಟಿ ಇಲಾಖೆಯನ್ನೇಕೆ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ...? ಎಂಬುದರ ಕುರಿತು ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಉತ್ತರಿಸಬೇಕು.
ಕೆಲ ದಿನಗಳ ಹಿಂದಷ್ಟೇ ಕೆಲ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿRamalinga Reddyರಾಮಲಿಂಗಾ ರೆಡ್ಡಿphone tappingಫೋನ್ ಕದ್ದಾಲಿಕೆKarnataka Assembly Electionಕರ್ನಾಟಕ ವಿಧಾನಸಭಾ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


