ರಾಜಕೀಯ

ವಯಸ್ಸಾಗಿರುವ ಬಿಎಸ್‌ವೈರನ್ನೇ ಸಿಎಂ ಅಭ್ಯರ್ಥಿಯೆಂದು ಘೋಷಿಸಿದ್ದು ಯಾಕೆ?: ಸ್ಮೃತಿ ಇರಾನಿಗೆ ವಿದ್ಯಾರ್ಥಿನಿ ಪ್ರಶ್ನೆ

ವಯಸ್ಸಾಗಿರುವ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿರುವುದು ಯಾಕೆ ಎಂದು ವಿದ್ಯಾರ್ಥಿನಿಯೊರ್ವಳು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಪ್ರಶ್ನಿಸಿದ್ದಾಳೆ...

ವಯಸ್ಸಾಗಿರುವ ಬಿಎಸ್‌ವೈರನ್ನೇ ಸಿಎಂ ಅಭ್ಯರ್ಥಿಯೆಂದು ಘೋಷಿಸಿದ್ದು ಯಾಕೆ?: ಸ್ಮೃತಿ ಇರಾನಿಗೆ ವಿದ್ಯಾರ್ಥಿನಿ ಪ್ರಶ್ನೆ
ಬಿಎಸ್ ಯಡಿಯೂರಪ್ಪ
Published On :
ಬೆಳಗಾವಿ: ವಯಸ್ಸಾಗಿರುವ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿರುವುದು ಯಾಕೆ ಎಂದು ವಿದ್ಯಾರ್ಥಿನಿಯೊರ್ವಳು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಪ್ರಶ್ನಿಸಿದ್ದಾಳೆ. 
ಬೆಳಗಾವಿಯ ಕೆಎಲ್ಇ ಸಂಸ್ಥೆಯ ಜೀರಗೆ ಸಭಾಭವನದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ನೇತೃತ್ವದಲ್ಲಿ ಕರುನಾಡ ಮಹಿಳಾ ಜಾಗೃತಿ ಸಂವಾದ ಆಯೋಜಿಸಲಾಗಿತ್ತು. ಸಂವಾದದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿನಿಯೊರ್ವಳು ಯುವ ಸಮೂಹ ಬಿಜೆಪಿಯನ್ನು ಬೆಂಬಲಿಸುತ್ತದೆ. ಆದರೆ ಬಿಜೆಪಿ ಮಾತ್ರ ಯುವ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ವಯಸ್ಸಾದ ಬಿಎಸ್ವೈ ಅವರನ್ನು ಘೋಷಿಸಿರುವುದು ಯಾಕೆ ಎಂದು ಪ್ರಶ್ನಿಸಿದಳು.
ಇದರಿಂದ ತಬ್ಬಿಬಾದ ಸ್ಮೃತಿ ಇರಾನಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ವಯಸ್ಸಾಗಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೂ ವಯಸ್ಸಾಗಿದೆ. ರಾಜಕೀಯವಾಗಿ ಅನುಭವ ಇರುವ ಬಿಎಸ್ವೈ ಅವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ. ಈ ಹಿಂದೆ ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ಸಿಎಂ ಆಗಿದ್ದರು. ಅನುಭವದ ಕೊರತೆಯಿಂದ ಅವರಿಂದ ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿ ಆಗಲಿಲ್ಲ. ಸಿಎಂ ಆಗಲು ಅನುಭವಬೇಕು ಎಂದು ಬಿಎಸ್ವೈ ಆಯ್ಕೆಯನ್ನು ಸಮರ್ಧಿಸಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.