ವಿಮಾನದಲ್ಲಿ ಅಮಿತ್ ಶಾ ಜತೆ ಡೀಲ್: ದಾಖಲೆ ಬಿಡುಗಡೆ ಮಾಡುವಂತೆ ಸಿಎಂಗೆ ಎಚ್ ಡಿಕೆ ಸವಾಲು
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು...

Published On :
ಮೈಸೂರು: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ವಿಮಾನದಲ್ಲೇ ಮುಂದಿನ ದಿನಗಳಲ್ಲಿ ಮರು ಮೈತ್ರಿ ಮಾಡಿಕೊಳ್ಳುವ ಡೀಲ್ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೊಸ ಬಾಂಬ್ ಸಿಡಿಸಿದ್ದಾರೆ.
ಇನ್ನು ಈ ಕುರಿತು ಖಾರವಾಗಿಯೇ ಪ್ರತಿಕ್ರಿಯಿಸಿದ ಕುಮಾಕಸ್ವಾಮಿ, ನಮ್ಮ ಭೇಟಿಯ ಬಗ್ಗೆ ಸಿಎಂ ಬಳಿ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.
ನಾವು ವಿಮಾನದಲ್ಲಿ ಭೇಟಿ ಮಾಡಿರುವ ದೃಶ್ಯ ಅವರ ಕನಸಿನಲ್ಲಿ ಬಂದಿರಬೇಕು. ಸಿಎಂ ಹಗಲುಗನಸು ಕಾಣುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಕುಮಾರಸ್ವಾಮಿ ಮತ್ತು ಅಮಿತ್ ಶಾ ದೆಹಲಿ ವಿಮಾನ ನಿಲ್ದಾಣದಲ್ಲಿ ಭೇಟಿಯಾಗಿದ್ದಾರೆ ಮತ್ತು ಒಂದೇ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಅದಕ್ಕೆ ಫೋಟೊ ಬೇಕಿದ್ದರೆ ಕೊಡಬಹುದು. ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಮ್. ಎರಡಕ್ಕೂ ಜನರ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ
ದೂರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯH D KumaraswamyAmit Shahಅಮಿತ್ ಶಾಎಚ್ ಡಿ ಕುಮಾರಸ್ವಾಮಿKarnataka Assembly Election
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


